ಡೆಲ್ಲಿ ವಿರುದ್ಧ ಪುಣೆಗೆ ಹೀನಾಯ ಸೋಲು
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯ ಪಂದ್ಯದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡ ಹೀನಾಯ ಸೋಲು ಅನುಭವಿಸಿದೆ...

Published On :
ಪುಣೆ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯ ಪಂದ್ಯದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡ ಹೀನಾಯ ಸೋಲು ಅನುಭವಿಸಿದೆ.
ಮಹಾರಾಷ್ಟ್ರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪುಣೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಇದರೊಂದಿಗೆ ಮೊದಲ ಬ್ಯಾಟಿಂಗ್ ಮಾಡಿದ ಡೆಲ್ಲಿ ಪರ ಸಂಜು ಸ್ಯಾಮ್ಸನ್ 102 ರನ್ ಗಳ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ 205 ರನ್ ಗಳನ್ನು ಪೇರಿಸಿತು.
206 ರನ್ ಗಳ ಬೃಹತ್ ಗುರಿ ಬೆನ್ನಟ್ಟಿದ ಪುಣೆಗೆ ಡೆಲ್ಲಿ ನಾಯಕ ಜಹೀರ್ ಖಾನ್ ಮತ್ತು ಅಮಿತ್ ಮಿಶ್ರಾ ಮಾರಕರಾದರು. ಇಬ್ಬರು ಬೌಲರ್ ಗಳು ತಲಾ ಮೂರು ವಿಕೆಟ್ ಪಡೆದಿದ್ದರಿಂದ ಪುಣೆ ತಂಡ 108 ರನ್ ಗಳಿಗೆ ಆಲೌಟ್ ಆಗಿದ್ದು ಡೆಲ್ಲಿ 97 ರನ್ ಗಳ ಅಂತರದಿಂದ ಜಯ ಗಳಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


