ಕ್ರಿಕೆಟ್

ಐಪಿಎಲ್ 2017: ಸನ್‌ರೈಸರ್ಸ್‌ ವಿರುದ್ಧ ನೈಟ್‌ರೈಡರ್ಸ್‌ಗೆ ಗೆಲುವು

ಕೋಲ್ಕತಾದ ಈಡನ್ ಗಾರ್ಡನ್ ನಲ್ಲಿ ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ಕೋಲ್ಕತಾ..

ಐಪಿಎಲ್ 2017: ಸನ್‌ರೈಸರ್ಸ್‌ ವಿರುದ್ಧ ನೈಟ್‌ರೈಡರ್ಸ್‌ಗೆ ಗೆಲುವು
Published On :
ಕೋಲ್ಕತಾ: ಕೋಲ್ಕತಾದ ಈಡನ್ ಗಾರ್ಡನ್ ನಲ್ಲಿ ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ಕೋಲ್ಕತಾ ನೈಟ್‌ರೈಡರ್ಸ್‌ 17 ರನ್ ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ತವರಿನಲ್ಲಿ ಎರಡನೇ ಬಾರಿ ಜಯ ಗಳಿಸಿದೆ.
ಸನ್‌ರೈಸರ್ಸ್‌ ಟಾಸ್‌ ಗೆದ್ದ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು.ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ನೈಟ್‌ರೈಡರ್ಸ್‌ ಕರ್ನಾಟಕದ ರಾಬಿನ್‌ ಉತ್ತಪ್ಪ (68) ಮತ್ತು ಮನೀಷ್ ಪಾಂಡೆ (46) ಅವರ ಉತ್ತಮ ಆಟದಿಂದಾಗಿ 172 ರನ್‌ ಗಳ ಸವಾಲಿನ ಮೊತ್ತ ದಾಖಲಿಸಿತು. 
172 ರನ್ ಗಳ ಗುರಿ ಬೆನ್ನತ್ತಿದ ಸನ್‌ರೈಸರ್ಸ್‌ ಪರ  ವಾರ್ನರ್‌(26), ಶಿಖರ್‌ ಧವನ್‌ (23)ಹಾಗೂ ಯುವರಾಜ್‌ ಸಿಂಗ್‌ (26) ಉತ್ತಮ ಆಟವಾಡಿದರೂ ಗೆಲುವು ಪಡೆಯಲು ಸಾಧ್ಯವಾಗಲಿಲ್ಲ.
ಸನ್‌ರೈಸರ್ಸ್‌ 6 ವಿಕೆಟ್‌ ಕಳೆದುಕೊಂಡು 155 ರನ್‌ ಗಳಿಸಿತು.  ನೈಟ್‌ರೈಡರ್ಸ್‌ 17 ರನ್‌ ಅಂತರದ ಗೆಲುವನ್ನು ತನ್ನದಾಗಿಸಿಕೊಂಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.