ಗುಜರಾತ್ ನಿಂದ ಗೆಲುವು ಕಸಿದ ಮುಂಬೈ 6 ವಿಕೆಟ್ ಗಳ ಭರ್ಜರಿ ಜಯ
ತೀವ್ರ ಕುತೂಹಲ ಕೆರಳಿಸಿದ್ದ ಐಪಿಎಲ್ ಸೀಸನ್ 10ನ ಮುಂಬೈ ಮತ್ತು ಗುಜರಾತ್ ತಂಡಗಳ ನಡುವಿನ ಪಂದ್ಯದಲ್ಲಿ ಮುಂಬೈ ತಂಡ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಮುಂಬೈ: ತೀವ್ರ ಕುತೂಹಲ ಕೆರಳಿಸಿದ್ದ ಐಪಿಎಲ್ ಸೀಸನ್ 10ನ ಮುಂಬೈ ಮತ್ತು ಗುಜರಾತ್ ತಂಡಗಳ ನಡುವಿನ ಪಂದ್ಯದಲ್ಲಿ ಮುಂಬೈ ತಂಡ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ತಂಡ ನೀಡಿದ್ದ 177 ರನ್ ಗಳ ಸವಾಲಿನ ಗುರಿಯನ್ನು ಮುಂಬೈ ತಂಡ ಕೇವಲ 4 ವಿಕೆಟ್ ಕಳೆದುಕೊಂಡು ಇನ್ನೂ ಮೂರು ಎಸೆತ ಬಾಕಿ ಇರುವಂತೆಯೇ ಮುಟ್ಟಿದೆ. ಪ್ರಮುಖವಾಗಿ ಆರಂಭಿಕ ಆಘಾತದ ಹೊರತಾಗಿಯೂ ಮುಂಬೈ ತಂಡ ತೋರಿದ ಅಮೋಘ ಬ್ಯಾಟಿಂಗ್ ಪ್ರದರ್ಶನ ಗುಜರಾತ್ ಕೈಯಿಂದ ಗೆಲುವನ್ನು ಕಸಿದಿದೆ ಎಂದು ಹೇಳಬಹುದು. ಆರಂಭಿಕ ಆಘಾತ ಎದುರಿಸಿದ್ದ ಮುಂಬೈಗೆ ರಾಣಾ ಆಕರ್ಷಕ ಅರ್ಧಶತಕ ಸಿಡಿಸಿ ಇನ್ನಿಂಗ್ಸ್ ಜೀವ ತುಂಬಿದರು.
53 ರನ್ ಗಳಿಸಿದ್ದ ರಾಣಾ ನಿರ್ಗಮನದ ಬಳಿಕ ಬಂದ ರೋಹಿತ್ ಶರ್ಮಾ ಅಜೇಯ 40 ರನ್ ಗಳಿಸಿದರೆ, ಶರ್ಮಾಗೆ ಉತ್ತಮ ಸಾಥ್ ನೀಡಿದ ಪೊಲ್ಲಾರ್ಡ್ 39 ರನ್ ಸಿಡಿಸಿ ತಂಡ ಗೆಲುವಿನ ಸನಿಹದಲ್ಲಿದ್ದಾಗ ವಿಕೆಟ್ ಒಪ್ಪಿಸಿದರು. ಬಳಿಕ ಬಂದ ಪಾಂಡ್ಯಾ 6 ರನ್ ಗಳಿಸಿ ಗೆಲುವಿನ ಔಪಚಾರಿಕತೆ ಮುಗಿಸಿದರು. ಅಂತಿಮವಾಗಿ ಮುಂಬೈ ತಂಡ 19.3 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 177 ರನ್ ಗಳಿಸಿ ಗುಜರಾತ್ ವಿರುದ್ಧ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.
ಮುಂಬೈ ಪರ ಆಕರ್ಷಕ ಅರ್ಧಶತಕ ಸಿಡಿಸಿದ ರಾಣಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


