ಆರ್ಸಿಬಿ ದಿಗ್ಗಜ ಬ್ಯಾಟಿಂಗ್ ಮಹಾಪತನಕ್ಕೆ ವಿರಾಟ್ ಕೊಹ್ಲಿ ಕಿಡಿ
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಹೀನಾಯ ಸೋಲು ಕಂಡಿದ್ದು ಆರ್ಸಿಬಿ ದಿಗ್ಗಜ ಬ್ಯಾಟಿಂಗ್...

Published On :
ಕೋಲ್ಕತ್ತಾ: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಹೀನಾಯ ಸೋಲು ಕಂಡಿದ್ದು ಆರ್ಸಿಬಿ ದಿಗ್ಗಜ ಬ್ಯಾಟಿಂಗ್ ಮಹಾಪತನಕ್ಕೆ ನಾಯಕ ವಿರಾಟ್ ಕೊಹ್ಲಿ ಕಿಡಿಕಾರಿದ್ದಾರೆ.
ಕೆಕೆಆರ್ ವಿರುದ್ಧ 132 ರನ್ ಗಳ ಗುರಿ ಪಡೆದಿದ್ದ ಆರ್ಸಿಬಿ ಕೇವಲ 49 ರನ್ ಗಳಿಗೆ ಆಲೌಟ್ ಆಗಿ 82 ರನ್ ಗಳ ಬೃಹತ್ ಸೋಲು ಕಂಡಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ವಿರಾಟ್ ಕೊಹ್ಲಿ ಇದು ನಮ್ಮ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶನವಾಗಿದ್ದು ನೋವಾಗುತ್ತಿದೆ. ಬೌಲಿಂಗ್ ನಲ್ಲಿ ಉತ್ತಮ ಪ್ರದರ್ಶನ ನೀಡಿ ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದು ನಾವು ಪಂದ್ಯವನ್ನು ಸುಲಭವಾಗಿ ಗೆಲ್ಲಬೇಕಿತ್ತು. ನಾನು ಏನನ್ನೂ ಹೇಳುವುದಿಲ್ಲ. ಈ ರೀತಿಯ ಪ್ರದರ್ಶನವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಬೆಂಗಳೂರು ತಂಡ ಕೋಲ್ಕತಾ ತಂಡವನ್ನು ಕೇವಲ 131 ರನ್ ಗಳಿಗೆ ಆಲ್ ಔಟ್ ಮಾಡಿತು. ಬಳಿಕ 132 ರನ್ ಗಳ ಗುರಿ ಬೆನ್ನು ಹತ್ತಿದ ಕೊಹ್ಲಿ ಆರಂಭದಿಂದಲೇ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ಕೇವಲ 44 ರನ್ ಗಳಿಗೆ ತಂಡದ ಬರೊಬ್ಬರಿ 7 ವಿಕೆಟ್ ಕಳೆದುಕೊಂಡು ಅಂತಿಮವಾಗಿ 49 ರನ್ ಗಳಿಗೆ ಆಲೌಟ್ ಆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
KolkataVirat Kohliವಿರಾಟ್ ಕೊಹ್ಲಿಕೋಲ್ಕತಾKolkata Knight Ridersರಾಯಲ್ ಚಾಲೆಂಜರ್ಸ್ ಬೆಂಗಳೂರುಕೋಲ್ಕತಾ ನೈಟ್ ರೈಡರ್ಸ್Royal Challengers Bengaluruಐಪಿಎಲ್ 2017IPL 2017
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


