ಆರ್ ಸಿಬಿ ವಿರುದ್ಧ ಗುಜರಾತ್ ಲಯನ್ಸ್ ಗೆಲುವಿನ ಘರ್ಜನೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) - ಗುಜರಾತ್ ಲಯನ್ಸ್ ನಡುವಿನ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಲಯನ್ಸ್ ಗೆಲುವು ಸಾಧಿಸಿದೆ.

Published On :
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) - ಗುಜರಾತ್ ಲಯನ್ಸ್ ನಡುವಿನ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಲಯನ್ಸ್ ಗೆಲುವು ಸಾಧಿಸಿದೆ.
ಪಂದ್ಯದ ಪ್ರಾರಂಭದಿಂದಲೂ ಆರ್ ಸಿಬಿ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಿದ ಗುಜರಾತ್ ಲಯನ್ಸ್ ತಂಡದ ಬ್ಯಾಟ್ಸ್ ಮನ್ ಗಳ ಸ್ಫೋಟಕ ಬ್ಯಾಟಿಂಗ್ ನಿಂದಾಗಿ ಕೇವಲ 13.5 ಓವರ್ ಗಳಲ್ಲಿ ಆರ್ ಸಿಬಿ ನೀಡಿದ 135 ರನ್ ಗಳ ಗುರಿಯನ್ನು ತಲುಪಿ 7 ವಿಕೆಟ್ ಗಳ ಜಯ ದಾಖಲಿಸಿದೆ.
ಆರಂಭಿಕ ಆಟಗಾರರಾದ ಕಿಶನ್ 11 ಎಸೆತಗಳಲ್ಲಿ 16 ರನ್ ಗಳಿಸಿ ಔಟಾದರೆ, 6 ಎಸೆತಗಳಲ್ಲಿ 3 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ನಂತರ ರೈನಾ ಮತ್ತು ಫಿಂಚ್ ಜೋಡಿ, ಆರ್ ಸಿಬಿ ಬೌಲರ್ ಗಳ ಎಸೆತಗಳನ್ನು ಮನಸೋ ಇಚ್ಛೆ ದಂಡಿಸಿದರು. 34 ಎಸೆತಗಳಲ್ಲಿ 72 ರನ್ ಗಳಿಸಿದ ಫಿಂಚ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಗುಜರಾತ್ ಲಯನ್ಸ್ ತಂಡ ಕೇವಲ 13.5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 135 ರನ್ ಗಳ ಗುರಿ ತಲುಪಿ ಆರ್ ಸಿಬಿ ಗೆಲುವಿನ ಕನಸನ್ನು ಭಗ್ನಗೊಳಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Royal Challengers Bangaloreರಾಯಲ್ ಚಾಲೆಂಜರ್ಸ್ ಬೆಂಗಳೂರುಆರ್ ಸಿಬಿGujarat Lionsಗುಜರಾತ್ ಲಯನ್ಸ್ಐಪಿಎಲ್ 2017IPL 2017
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


