ಗಂಗೂಲಿ ಆಯ್ತು ಇದೀಗ ಪಾಂಟಿಂಗ್ ಕನಸಿನ ಐಪಿಎಲ್ ತಂಡದಲ್ಲಿ ಯಾರಿದ್ದಾರೆ ನೋಡಿ!
ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರು ತಮ್ಮ ಕನಸಿನ ಐಪಿಎಲ್ ತಂಡವನ್ನು ಪ್ರಕಟಿಸಿದ ಬೆನ್ನಲ್ಲೇ ಇದೀಗ ಆಸ್ಟ್ರೇಲಿಯಾದ ಮಾಜಿ...

Published On :
ಮೆಲ್ಬೋರ್ನ್(ಆಸ್ಟ್ರೇಲಿಯಾ): ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರು ತಮ್ಮ ಕನಸಿನ ಐಪಿಎಲ್ ತಂಡವನ್ನು ಪ್ರಕಟಿಸಿದ ಬೆನ್ನಲ್ಲೇ ಇದೀಗ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಟಿಂಗ್ ತಮ್ಮ ಕನಸಿನ ಐಪಿಎಲ್ ತಂಡವನ್ನು ಪ್ರಕಟಿಸಿದ್ದಾರೆ.
ಐಪಿಎಲ್ 2017ರ ಬೆಸ್ಟ್ ಇಲೆವೆನ್ ತಂಡದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಹಾಶೀಂ ಆಮ್ಲಾ, ಸನ್ ರೈಸರ್ಸ್ ಹೈದರಾಬಾದ್ ತಂಡದ ಡೇವಿಡ್ ವಾರ್ನರ್, ಗುಜರಾತ್ ಲಯನ್ಸ್ ತಂಡದ ಸುರೇಶ್ ರೈನಾ, ಮುಂಬೈ ಇಂಡಿಯನ್ಸ್ ತಂಡದ ಜೋಸ್ ಬಟ್ಲರ್ ಮತ್ತು ನಿತೀಶ್ ರಾಣಾ, ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಗ್ಲೇನ್ ಮ್ಯಾಕ್ಸ್ ವೆಲ್, ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಕ್ರಿಸ್ ಮೋರಿಸ್, ಮುಂಬೈ ಇಂಡಿಯನ್ಸ್ ತಂಡದ ಹರ್ಭಜನ್ ಸಿಂಗ್, ಮಿಚೇಲ್ ಮೇಕ್ಲನ್ ಘನ್, ಸನ್ ರೈಸರ್ಸ್ ಹೈದರಾಬಾದ್ ತಂಡದ ಭುವನೇಶ್ವರ್ ಕುಮಾರ್ ಮತ್ತು ರಶೀದ್ ಖಾನ್ ಸ್ಥಾನಪಡೆದಿದ್ದಾರೆ.
ಗಂಗೂಲಿ ಕನಸಿನ ಐಪಿಎಲ್ ತಂಡದಲ್ಲಿ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಸ್ಥಾನ ಪಡೆದಿದ್ದರೆ, ಪಾಂಟಿಂಗ್ ತಂಡಕ್ಕೆ ಆಯ್ಕೆ ಆಗುವಲ್ಲಿ ವಿಫಲರಾಗಿದ್ದಾರೆ. ಇನ್ನು ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಇಬ್ಬರ ತಂಡದಲ್ಲೂ ಸ್ಥಾನಪಡೆಯುವಲ್ಲಿ ವಿಫಲರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


