ಕ್ರಿಕೆಟ್

ವಾಂಖೆಡೆ ಪಂದ್ಯವನ್ನೂ ಸೋತ ಆರ್ ಸಿಬಿ; ಮುಂಬೈಗೆ 5 ವಿಕೆಟ್ ಗಳ ರೋಚಕ ಜಯ

ವಾಂಖೆಡೆಯಲ್ಲೂ ಬೆಂಗಳೂರು ತಂಡ ಸೋಲಿನ ಸರಣಿ ಮುಂದುವರೆದಿದ್ದು, ಮುಂಬೈ ವಿರುದ್ಧ ಸೋಮವಾರ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ 5 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.

ವಾಂಖೆಡೆ ಪಂದ್ಯವನ್ನೂ ಸೋತ ಆರ್ ಸಿಬಿ; ಮುಂಬೈಗೆ 5 ವಿಕೆಟ್ ಗಳ ರೋಚಕ ಜಯ
ಕ್ರಿಕ್ ಇನ್ಫೋ ಚಿತ್ರ
Published On :

ಮುಂಬೈ: ವಾಂಖೆಡೆಯಲ್ಲೂ ಬೆಂಗಳೂರು ತಂಡ ಸೋಲಿನ ಸರಣಿ ಮುಂದುವರೆದಿದ್ದು, ಮುಂಬೈ ವಿರುದ್ಧ ಸೋಮವಾರ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ 5 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.

ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನೀಡಿದ 163 ರನ್ ಗಳ ಗುರಿ ಬೆನ್ನು ಹತ್ತಿದ ಮುಂಬೈ ಇಂಡಿಯನ್ಸ್ ತಂಡ ನಾಯಕ ರೋಹಿತ್ ಶರ್ಮಾ ಅವರ ಅಜೇಯ ಆಟದ ನೆರವಿನಿಂದ 19.5 ಓವರ್  ಗಳಲ್ಲಿ 5 ವಿಕೆಟ್ ಕಳೆದು ಕೊಂಡು 165 ರನ್ ಗಳಿಸಿತು. ಆ ಮೂಲಕ ಬೆಂಗಳೂರು ತಂಡ ವಿರುದ್ಧ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು. ಮುಂಬೈ ತಂಡದ ನಾಯಕ ರೋಹಿತ್ ಶರ್ಮಾ ಅಜೇಯ ಅರ್ಧಶತಕ ಸಿಡಿಸುವ ಮೂಲಕ ಮುಂಬೈ ತಂಡವನ್ನು ಯಶಸ್ವಿಯಾಗಿ ಗೆಲುವಿನ ದಡ ಸೇರಿಸಿದರು. ಶರ್ಮಾಗೆ ಹಾರ್ದಿಕ್ ಪಾಂಡ್ಯಾ ಅಂತಿಮ ಹಂತದಲ್ಲಿ ಉತ್ತಮ ಸಾಥ್ ನೀಡಿದರು.

ಉಳಿದಂತೆ ಆರಂಭಿಕ ಆಟಗಾರ ಪಾರ್ಥೀವ್ ಪಟೇಲ್ ಶೂನ್ಯಕ್ಕೆ ಔಟ್ ಆದರೆ, ಬಟ್ಲರ್ 33 ರನ್ ಗಳಿಸಿ ನೇಗಿ ಬೌಲಿಂಗ್ ನಲ್ಲಿ ಔಟ್ ಆದರು. ಬಳಿಕ ಬಂದ ರಾಣಾ 22 ರನ್ ಗಳಿಸಿದರೆ, ಪೊಲ್ಲಾರ್ಡ್ 17 ರನ್ ಗಳಿಸಿ ಚಾಹಲ್ ಬೌಲಿಂಗ್ ನಲ್ಲಿ ವಿಕೆಟ್ ಕೈ ಚೆಲ್ಲಿದರು. ಶರ್ಮಾ 9 ರನ್ ಗಳಿಸಿ ಔಟ್ ಆದರೆ ಬಳಿಕ ಕ್ರೀಸ್ ಗೆ ಬಂದ ಪಾಂಡ್ಯಾ ಸಮಯೋಚಿತ ಬ್ಯಾಟಿಂಗ್ ಪ್ರದರ್ಶನದ ಮೂಲಕ ರೋಹಿತ್ ಶರ್ಮಾಗೆ ಉತ್ತಮ ಸಾಥ್ ನೀಡಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.