ಲಂಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಕಣಕ್ಕೆ: ಕೊಹ್ಲಿ
ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ಕೊಲಂಬೊದಲ್ಲಿ ನಾಳೆಯಿಂದ ಆರಂಭಗೊಳ್ಳಲಿದ್ದು ಈ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಮೈದಾನಕ್ಕಿಳಿಯುವುದು ಬಹುತೇಕ ಖಚಿತವಾಗಿದೆ...

Published On :
ಕೊಲಂಬೊ: ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ಕೊಲಂಬೊದಲ್ಲಿ ನಾಳೆಯಿಂದ ಆರಂಭಗೊಳ್ಳಲಿದ್ದು ಈ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಮೈದಾನಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
ಕೊಲಂಬೊ ಟೆಸ್ಟ್ ಗೂ ಮುನ್ನ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು, ಕೆಎಲ್ ರಾಹುಲ್ ಗೆ ಆಡುವ 11ರ ಬಳಗದಲ್ಲಿ ಅವಕಾಶ ನೀಡುವುದು ಬಹಳ ಕಷ್ಟದ ಕೆಲಸವಾಗಿದ್ದರೂ ತಂಡದ ನಿರ್ಧಾರವನ್ನು ಎಲ್ಲ ಆಟಗಾರರೂ ಅರ್ಥ ಮಾಡಿಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.
ಇನ್ನು ಕಳೆದ ಎರಡು ವರ್ಷದಿಂದ ಟೆಸ್ಟ್ ತಂಡದಲ್ಲಿ ಕೆಎಲ್ ರಾಹುಲ್ ಕೊಡುಗೆ ಅಪಾರವಾಗಿದೆ. ಎರಡನೇ ಟೆಸ್ಟ್ ಪಂದ್ಯದಲ್ಲಿ ರಾಹುಲ್ ಮೈದಾನಕ್ಕಿಳಿಯುವುದು ಬಹುತೇಕ ಖಚಿವಾಗಿರುವುದರಿಂದ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ಶಿಖರ್ ಧವನ್ ಅಥವಾ ಅಭಿನವ್ ಮುಕುಂದ್ ತಂಡದಿಂದ ಹೊರ ಉಳಿಯಬಹುದು ಎಂದು ಕೊಹ್ಲಿ ಹೇಳಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ ಕಾಲಿನ ಗಾಯದ ಸಮಸ್ಯೆಗೆ ತುತ್ತಾಗಿದ್ದರು. ಇದಾದ ಬಳಿಕ ಚೇತರಿಸಿಕೊಂಡಿದ್ದ ಅವರು ಶ್ರೀಲಂಕಾ ಪ್ರವಾಸಕ್ಕೆ ಆಯ್ಕೆಯಾಗಿದ್ದರು. ಆದರೆ ತೀವ್ರ ಜ್ವರದಿಂದ ಬಳಲುತ್ತಿದ್ದ ರಾಹುಲ್ ಮೊದಲ ಟೆಸ್ಟ್ ಪಂದ್ಯದಿಂದ ಹೊರಗೆ ಉಳಿದಿದ್ದರು.
ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0ಯಿಂದ ಮುನ್ನಡೆ ಸಾಧಿಸಿದೆ. ದ್ವಿತೀಯ ಟೆಸ್ಟ್ ಪಂದ್ಯ ನಾಳೆ ಪ್ರಾರಂಭವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


