ಕ್ರಿಕೆಟ್

ಲಂಕಾ ವಿರುದ್ಧದ ಪಂದ್ಯ: ದಾಖಲೆ ನಿರ್ಮಿಸಿದ ರವೀಂದ್ರ ಜಡೇಜಾ

ಅತ್ಯಂತ ವೇಗವಾಗಿ 150 ವಿಕೆಟ್ ಗಳನ್ನು ಗಳಿಸಿದ 2 ನೇ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ರವೀಂದ್ರ ಜಡೇಜಾ ಪಾತ್ರರಾಗಿದ್ದಾರೆ.

ಲಂಕಾ ವಿರುದ್ಧದ ಪಂದ್ಯ: ದಾಖಲೆ ನಿರ್ಮಿಸಿದ ರವೀಂದ್ರ ಜಡೇಜಾ
ಲಂಕಾ ವಿರುದ್ಧದ ಪಂದ್ಯ
Published On :
ಕೊಲಂಬೋ: ಅತ್ಯಂತ ವೇಗವಾಗಿ 150 ವಿಕೆಟ್ ಗಳನ್ನು ಗಳಿಸಿದ 2 ನೇ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ರವೀಂದ್ರ ಜಡೇಜಾ ಪಾತ್ರರಾಗಿದ್ದಾರೆ. ತಂಡದ ಸಹ ಆಟಗಾರ ರವಿಚಂದ್ರನ್ ಅಶ್ವಿನ್ ಅವರ ಹಿಂದಿನ ಸ್ಥಾನದಲ್ಲಿರುವ ರವೀಂದ್ರ ಜಡೇಜಾ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಧನಂಜಯ್ ಡೇ ಸಿಲ್ವಾ ವಿಕೆಟ್ ಪಡೆಯುವ ಮೂಲಕ  ಅತ್ಯಂತ ವೇಗವಾಗಿ 150 ವಿಕೆಟ್ ಗಳನ್ನು ಗಳಿಸಿದ 2 ನೇ ಭಾರತೀಯ ಬೌಲರ್ ಎನಿಸಿದ್ದಾರೆ. 
ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾದ ಮೊದಲ ಇನ್ನಿಂಗ್ಸ್ ನಲ್ಲಿ ಬೌಲಿಂಗ್ ಮಾಡಿದ ರವೀಂದ್ರ ಜಡೇಜಾ ಈ ಸಾಧನೆ ಮಾಡಿದ್ದಾರೆ. ಜಡೇಜಾ ಈ ವರೆಗೂ 32 ಪಂದ್ಯಗಳನ್ನಾಡಿದ್ದು, 150 ವಿಕೆಟ್ ಗಳಿಸಿದ್ದಾರೆ. ಆರ್ ಅಶ್ವಿನ್ ಈ ವರೆಗೂ 29 ಪಂದ್ಯಗಳನ್ನಾಡಿದ್ದಾರೆ. 
ಇ ಪ್ರಸನ್ನ ಹಾಗೂ ಅನಿಲ್ ಕುಂಬ್ಳೆ 34 ಪಂದ್ಯಗಳನ್ನಾಡಿದ್ದು 150 ವಿಕೆಟ್ ಗಳನ್ನು ಪಡೆದಿದ್ದರೆ, ಹರ್ಭಜನ್ ಸಿಂಗ್ 35 ಪಂದ್ಯಗಳಲ್ಲಿ 150 ವಿಕೆಟ್ ಗಳನ್ನು ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.