ಕ್ರಿಕೆಟ್

'ಉತ್ತಮ ಪ್ರದರ್ಶನ' ಭಾರತ ಪುರುಷ-ಮಹಿಳೆಯರ ತಂಡದ ಆಯ್ಕೆಗಾರರಿಗ ತಲಾ 15 ಲಕ್ಷ ಬಹುಮಾನ

ಟೀಂ ಇಂಡಿಯಾ ಪುರುಷರ ಮತ್ತು ಮಹಿಳಾ ತಂಡ ಉತ್ತಮ ಪ್ರದರ್ಶನ ನೀಡುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)...

'ಉತ್ತಮ ಪ್ರದರ್ಶನ' ಭಾರತ ಪುರುಷ-ಮಹಿಳೆಯರ ತಂಡದ ಆಯ್ಕೆಗಾರರಿಗ ತಲಾ 15 ಲಕ್ಷ ಬಹುಮಾನ
ವಿರಾಟ್ ಕೊಹ್ಲಿ-ಮಿಥಾಲಿ ರಾಜ್
Published On :
ನವದೆಹಲಿ: ಟೀಂ ಇಂಡಿಯಾ ಪುರುಷರ ಮತ್ತು ಮಹಿಳಾ ತಂಡ ಉತ್ತಮ ಪ್ರದರ್ಶನ ನೀಡುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಯ್ಕೆಗಾರರಿಗೆ ತಲಾ 15 ಲಕ್ಷ ರುಪಾಯಿ ಬಹುಮಾನ ಘೋಷಿಸಿದೆ. 
ಬಿಸಿಸಿಐನ ಉನ್ನತ ಅಧಿಕಾರಿಗಳು ಮತ್ತು ನಿರ್ವಾಹಕರ ಸಮಿತಿ ನಡುವಿನ ಸಭೆ ಬಳಿಕ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ತಂಡಗಳು ಉತ್ತಮ ಪ್ರದರ್ಶನ ನೀಡುತ್ತಿರುವ ಹಿನ್ನೆಲೆಯಲ್ಲಿ ಉತ್ತಮವನ್ನು ತಂಡವನ್ನು ಆಯ್ಕೆ ಮಾಡಿದ ಟೀಂ ಇಂಡಿಯಾ ಪುರುಷರ ತಂಡದ ಆಯ್ಕೆಗಾರರು ಮತ್ತು ಮಹಿಳಾ ತಂಡದ ಆಯ್ಕೆಗಾರರಿಗೆ ತಲಾ 15 ಲಕ್ಷ ಬಹುಮಾನವನ್ನು ನೀಡಲಾಗುತ್ತದೆ. 
ಟೀಂ ಇಂಡಿಯಾ ಪುರುಷರ ತಂಡ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಅಗ್ರ ಸ್ಥಾನ ಮತ್ತು ಚಾಂಪಿಯನ್ಸ್ ಟ್ರೋಫಿ ಫೈನಲ್ ಹಂತಕ್ಕೆ ತಲುಪಿತ್ತು. ಇನ್ನು ಮಹಿಳೆಯರ ತಂಡ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ನಲ್ಲಿ ಫೈನಲ್ ಪ್ರವೇಶಿಸಿತ್ತು ಈ ಹಿನ್ನೆಲೆಯಲ್ಲಿ ಆಯ್ಕೆಗಾರರಿಗೆ ಬಿಸಿಸಿಐ ಬಹುಮಾನ ಘೋಷಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.