ಟೆಸ್ಟ್ ನಂಬರ್ 1 ಆಲ್‌ರೌಂಡರ್: ಎಂಎಸ್ ಧೋನಿ, ಕೊಹ್ಲಿಗೆ ಕೃತಜ್ಞತೆ ತಿಳಿಸಿದ ಜಡೇಜಾ
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬಿಡುಗಡೆ ಮಾಡಿರುವ ನೂತನ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಆಲ್ ರೌಂಡರ್ ವಿಭಾಗದಲ್ಲಿ ಅಗ್ರಸ್ಥಾನಕ್ಕೇರಿರುವ ರವೀಂದ್ರ...

Published On :
ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬಿಡುಗಡೆ ಮಾಡಿರುವ ನೂತನ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಆಲ್‌ರೌಂಡರ್ ವಿಭಾಗದಲ್ಲಿ ಅಗ್ರಸ್ಥಾನಕ್ಕೇರಿರುವ ರವೀಂದ್ರ ಜಡೇಜಾ ಅಗ್ರಸ್ಥಾನಕ್ಕೇರಿದ್ದಾರೆ.
ಟೆಸ್ಟ್ ರ್ಯಾಂಕಿಂಗ್ ನಲ್ಲಿ ರವೀಂದ್ರ ಜಡೇಜಾ ಟೆಸ್ಟ್ ಆಲ್‌ರೌಂಡರ್ ಮತ್ತು ಬೌಲಿಂಗ್ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಅಗ್ರಸ್ಥಾನಕ್ಕೇರಿದ್ದು ಇದಕ್ಕೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಮಾಜಿ ನಾಯಕ ಎಂಎಸ್ ಧೋನಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ತಂಡದಲ್ಲಿ ಆಡಲು ಇಬ್ಬರು ನಾಯಕರು ನನಗೆ ಅವಕಾಶಗಳನ್ನು ನೀಡಿದ್ದರಿಂದ ನಾನು ಇಂದು ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದೇನೆ ಎಂದು ಹೇಳಿದ್ದಾರೆ.
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರವೀಂದ್ರ ಜಡೇಜಾ ಆಲ್ ರೌಂಡರ್ ಪ್ರದರ್ಶನವನ್ನು ನೀಡುತ್ತಿದ್ದಾರೆ. ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಜಡೇಜಾ 5 ವಿಕೆಟ್ ಪಡೆದಿದ್ದರು. ಇನ್ನು ಕೊಲಂಬೊ ಟೆಸ್ಟ್ ನಲ್ಲಿ ಅಜೇಯ 70 ರನ್ ಸಿಡಿಸಿದ್ದು ಅಲ್ಲದೆ 7 ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಟೆಸ್ಟ್ ರ್ಯಾಂಕಿಂಗ್ ನಲ್ಲಿ ಜಡೇಜಾ ಅಗ್ರಸ್ಥಾನಕ್ಕೇರಿದ್ದರಿಂದ ತಂಡದ ನಾಯಕ ವಿರಾಟ್ ಕೊಹ್ಲಿ ಶುಭಾಶಯ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Virat Kohliವಿರಾಟ್ ಕೊಹ್ಲಿMS Dhoniಆಲ್‌ರೌಂಡರ್Testಟೆಸ್ಟ್ಎಂಎಸ್ ಧೋನಿRavindra Jadejaರವೀಂದ್ರ ಜಡೇಜಾall-rounder
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


