ಪಾಕಿಸ್ತಾನ ವಿರುದ್ಧ ಟೆಸ್ಟ್ ಕ್ರಿಕೆಟ್ ಆಡದ ಟೀಂ ಇಂಡಿಯಾ ನಿಜವಾದ ನಂ.1 ಅಲ್ಲ: ಡೀನ್ ಜೋನ್ಸ್
ಪಾಕಿಸ್ತಾನ ವಿರುದ್ಧ ಟೆಸ್ಟ್ ಕ್ರಿಕೆಟ್ ಆಡದ ಟೀಂ ಇಂಡಿಯಾ ಟೆಸ್ಟ್ ನಲ್ಲಿ ನಿಜವಾದ ನಂಬರ್ 1 ತಂಡ ಆಗಿರಲು ಸಾಧ್ಯವಿಲ್ಲ ಎಂದು ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಡೀನ್...

Published On :
ನವದೆಹಲಿ: ಪಾಕಿಸ್ತಾನ ವಿರುದ್ಧ ಟೆಸ್ಟ್ ಕ್ರಿಕೆಟ್ ಆಡದ ಟೀಂ ಇಂಡಿಯಾ ಟೆಸ್ಟ್ ನಲ್ಲಿ ನಿಜವಾದ ನಂಬರ್ 1 ತಂಡ ಆಗಿರಲು ಸಾಧ್ಯವಿಲ್ಲ ಎಂದು ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಡೀನ್ ಜೋನ್ಸ್ ಹೇಳಿದ್ದಾರೆ.
ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಟೀಂ ಇಂಡಿಯಾ ನಂಬರ್ 1 ಸ್ಥಾನದಲ್ಲಿರಬಹುದು. ಆದರೆ ಪಾಕಿಸ್ತಾನದ ವಿರುದ್ಧ ಟೆಸ್ಟ್ ಸರಣಿ ಆಡದ ಭಾರತ ನಿಜವಾದ ನಂಬರ್ 1 ತಂಡ ಆಗಿರಲು ಸಾಧ್ಯವಿಲ್ಲ ಎಂದು ಡೀನ್ ಜೋನ್ಸ್ ಅಭಿಪ್ರಾಯಪಟ್ಟಿದ್ದಾರೆ.
ಉಭಯ ದೇಶಗಳ ನಡುವೆ 2007-08ರಿಂದ ಯಾವುದೇ ರೀತಿಯ ಟೆಸ್ಟ್ ಸರಣಿಗಳು ಆಯೋಜನೆಗೊಂಡಿಲ್ಲ. ಭಾರತ-ಪಾಕ್ ನಡುವಿನ ಟೆಸ್ಟ್ ಪಂದ್ಯ ನೋಡಲು ನಾನು ಕಾತುರನಾಗಿದ್ದೇನೆ ಎಂದು ಹೇಳಿದ್ದಾರೆ.
ಪಾಕಿಸ್ತಾನ ಸೂಪರ್ ಲೀಗ್ ನಿಂದ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಇನ್ನು ಕಳೆದ ಮೂರು ನಾಲ್ಕು ವರ್ಷಗಳಿಂದ ಪಾಕ್ ಕ್ರಿಕೆಟ್ ತುಂಬಾ ಸುಧಾರಣೆ ಕಂಡಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaPakistanಪಾಕಿಸ್ತಾನTestಟೆಸ್ಟ್ICC Test rankingsDean Jonesಡೀನ್ ಜೋನ್ಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


