ಶ್ರೀನಗರದಲ್ಲಿ 'ಭಾರತ್ ಮಾತಾ ಕೀ ಜೈ' ಘೋಷಣೆ ಕೂಗಿದ ಕಾಶ್ಮೀರ ಪಂಡಿತ ಮಹಿಳೆ: ಸುರೇಶ್ ರೈನಾ ಸೆಲ್ಯೂಟ್
ಸ್ವಾತಂತ್ರ್ಯ ದಿನಾಚರಣೆಯಂದು ಕಾಶ್ಮೀರ ಕಣಿವೆಯಲ್ಲಿ ಪ್ರತಿಭಟನೆಗಳಿಂದ ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿತ್ತು. ಎಲ್ಲಾ ಅಂಗಡಿ ಮುಂಗಟ್ಟುಗಳು ಮುಚ್ಚಿ ...

Published On :
ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯಂದು ಕಾಶ್ಮೀರ ಕಣಿವೆಯಲ್ಲಿ ಪ್ರತಿಭಟನೆಗಳಿಂದ ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿತ್ತು. ಎಲ್ಲಾ ಅಂಗಡಿ ಮುಂಗಟ್ಟುಗಳು ಮುಚ್ಚಿ ಬಂದ್ ವಾತಾವಾರಣ ನಿರ್ಮಾಣವಾಗಿತ್ತು.
ಇದೇ ವೇಳೆ ಶ್ರೀನಗರದ ಲಾಲ್ ಚೌಕ್ ಬಳಿ ಒಂದು ಅತ್ಯದ್ಬುತ ಎನ್ನುವ ಘಟನೆ ನಡೆದಿತ್ತು. ಕಾಶ್ಮೀರ ಪಂಡಿತ ಮಹಿಳೆ ಖಾಲಿ ಹೊಡೆಯುತ್ತಿದ್ದ ರಸ್ತೆಯಲ್ಲಿ ನಿಂತು ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ.
ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಹಲವೆಡೆ ನಿರ್ಬಂಧ ಹೇರಲಾಗಿತ್ತು. ಪ್ರತ್ಯೇಕತಾವಾದಿಗಳು ಬಂದ್ ಗೆ ಕರೆ ನೀಡಿದ್ದರು. ಇಂಥಹ ಸಮಯದಲ್ಲಿ ಧೈರ್ಯದಿಂದ ರಸ್ತೆಗೆ ಬಂದ ಮಹಿಳೆ ಭಾರತ್ ಮಾತಾ ಕೀ ಜೈ, ವಂದೇ ಮಾತರಂ, ನೀನು ಭಾರತದಿಂದ ಬಂದಿದ್ದೇ ಆದರೇ ಭಾರತ್ ಮಾತಾ ಕೀ ಜೈ ಎಂದು ಕೂಗುವುದು ನಮ್ಮ ಕರ್ತವ್ಯ ಎಂದು ಹೇಳಿದ್ದಾರೆ.
ಮಹಿಳೆಯ ಧೈರ್ಯಕ್ಕೆ ಮೆಚ್ಚಿರುವ ಭಾರತೀಯ ಕ್ರಿಕೆಟಿಗ ಸುರೇಶ್ ರೈನಾ ಆಕೆಯನ್ನು ಹೊಗಳಿ ವಿಡಿಯೋ ಶೇರ್ ಮಾಡಿದ್ದಾರೆ.
#Kashmiripandit lady chanting "Bharat mata ki jai" in Srinagar on #IndependenceDay! She is a brave heart! Salute!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Suresh Rainaಸುರೇಶ್ ರೈನಾSaluteBharat Mata Ki Jaiಭಾರತ್ ಮಾತಾ ಕೀ ಜೈಸೆಲ್ಯೂಟ್Kashmiri Pandit womanಕಾಶ್ಮೀರಿ ಪಂಡಿತ ಮಹಿಳೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


