ಟೀಂ ಇಂಡಿಯಾಗೆ ಏಕದಿನ ಸರಣಿ ಗೆಲುವಿನ ತವಕ
ಶ್ರೀಲಂಕಾ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಎರಡು ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ ಇಂದು ನಡೆಯಲಿರುವ ಮೂರನೇ ಪಂದ್ಯವನ್ನು ಗೆದ್ದು ಸರಣಿ...

Published On :
ಪಲ್ಲೆಕಿಲೆ: ಶ್ರೀಲಂಕಾ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಎರಡು ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ ಇಂದು ನಡೆಯಲಿರುವ ಮೂರನೇ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿದೆ.
ಲಂಕಾ ವಿರುದ್ಧದ ಎರಡನೇ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಮಾಡಿದ ಅನಿರೀಕ್ಷಿತ ಬದಲಾವಣೆಗಳಿಂದ ಕೂದಲೆಳೆಯ ಅಂತರದಿಂದ ಟೀಂ ಇಂಡಿಯಾ ಸೋಲಿನಿಂದ ಪಾರಾಗಿತ್ತು. ಮಾಜಿ ನಾಯಕ ಎಂಎಸ್ ಧೋನಿ ಮತ್ತು ವೇಗಿ ಭುವನೇಶ್ವರ್ ಜೋಡಿ ಶತಕದ ಜತೆಯಾಟ ತಂಡವನ್ನು ಗೆಲುವಿನ ದಡ ಸೇರಿಸಿತ್ತು.
ಇನ್ನು ಇಂದು ನಡೆಯಲಿರುವ ಮೂರನೇ ಏಕದಿನ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಳ್ಳುವ ತವಕದಲ್ಲಿದೆ. ಈ ಹಿಂದೆ ನಡೆದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಲಂಕಾ ತಂಡವನ್ನು ಕ್ಲೀನ್ ಸ್ವೀಪ್ ಮಾಡಿತ್ತು. ಅದೇ ರೀತಿ ಐದು ಏಕದಿನ ಪಂದ್ಯಗಳ ಸರಣಿಯನ್ನು ಗೆಲ್ಲುವುದು ಟೀಂ ಇಂಡಿಯಾದ ಸದ್ಯದ ಗುರಿ.
ಸಂಭವನೀಯ ಆಟಗಾರರ ಪಟ್ಟಿ:
ಭಾರತ
ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ(ನಾಯಕ), ಕೆಎಲ್ ರಾಹುಲ್, ಎಂಎಸ್ ಧೋನಿ, ಕೇದಾರ್ ಜಾದವ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯುಜುವೇಂದ್ರ ಚಾಹಲ್, ಜಸ್ ಪ್ರೀತ್ ಬೂಮ್ರಾ.
ಶ್ರೀಲಂಕಾ
ಲಹಿರು ತಿರಿಮನ್ನೆ, ನಿರೋಶನ್ ಡಿಕ್ ವೆಲ್ಲಾ, ಕುಸುಲ್ ಮೆಂಡಿಸ್, ಚಾಂಡಿಮಲ್, ಏಂಜೆಲೋ ಮ್ಯಾಥ್ಯೂಸ್, ಚಾಮರ ಕಾಪುಗೇಡರ(ನಾಯಕ), ಸಿರಿವರ್ಧನ, ಅಖಿಲ ಧನಂಜಯ, ಮಾಲಿಂಗ, ದುಷ್ಮಾಂತ ಚಮೀರ, ವಿಶ್ವ ಫರ್ನಾಂಡೊ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


