2019ರ ಐಸಿಸಿ ವಿಶ್ವಕಪ್ ಟೂರ್ನಿಗೆ ನೇರ ಪ್ರವೇಶ ಅರ್ಹತೆ ಕಳೆದುಕೊಂಡ ಲಂಕಾ
ದುಬೈ: ಟೀಂ ಇಂಡಿಯಾ ವಿರುದ್ಧದ ಐದು ಏಕದಿನ ಪಂದ್ಯಗಳ ಸರಣಿಯಲ್ಲಿ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗದ ಶ್ರೀಲಂಕಾ ತಂಡ 2019ರ ಐಸಿಸಿ ವಿಶ್ವಕಪ್ ಟೂರ್ನಿಗೆ...

Published On :
ದುಬೈ: ಟೀಂ ಇಂಡಿಯಾ ವಿರುದ್ಧದ ಐದು ಏಕದಿನ ಪಂದ್ಯಗಳ ಸರಣಿಯಲ್ಲಿ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗದ ಶ್ರೀಲಂಕಾ ತಂಡ 2019ರ ಐಸಿಸಿ ವಿಶ್ವಕಪ್ ಟೂರ್ನಿಗೆ ನೇರ ಪ್ರವೇಶದ ಅರ್ಹತೆಯನ್ನು ಕಳೆದುಕೊಂಡಿದೆ.
2019ರಲ್ಲಿ ಇಂಗ್ಲೆಂಡ್ ನಲ್ಲಿ ಐಸಿಸಿ ಏಕದಿನ ವಿಶ್ವಕಪ್ ನಡೆಯಲಿದ್ದು ಐಸಿಸಿ ನಿಯಮಾವಳಿ ಪ್ರಕಾರ ಸೆಪ್ಟೆಂಬರ್ 30ರವರೆಗೆ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರ ಐದು ಸ್ಥಾನಗಳಲ್ಲಿರುವ ತಂಡಗಳು ನೇರ ಪ್ರವೇಶದ ಅರ್ಹತೆ ಪಡೆಯಲಿವೆ. ಆದರೆ 87 ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿರುವ ಶ್ರೀಲಂಕಾದ ಹಾದಿ ದುರ್ಗಮವಾಗಿದೆ.
ಸದ್ಯ ಟೀಂ ಇಂಡಿಯಾ ವಿರುದ್ಧ ನಾಲ್ಕು ಪಂದ್ಯಗಳನ್ನು ಸೋತಿರುವ ಶ್ರೀಲಂಕಾ, ವೆಸ್ಟ್ ಇಂಡೀಸ್ ತಂಡ ತನ್ನ ಮುಂದಿನ ಸರಣಿಯನ್ನು ಗಮನಿಸಬೇಕಿದೆ. ವೆಸ್ಟ್ ಇಂಡೀಸ್ ತಂಡ ಐರ್ಲೆಂಡ್ ವಿರುದ್ಧ ಗೆದ್ದರೆ ಅಂಕಪಟ್ಟಿಯಲ್ಲಿ ಲಂಕಾ ತಂಡವನ್ನು ಹಿಂದಿಕ್ಕಲಿದ್ದು ಆಗ ಶ್ರೀಲಂಕಾಗೆ ನೇರ ಅರ್ಹತೆ ಪಡೆಯುವುದು ದುಸ್ಸಾಹಸವಾಗಲಿದೆ.
ವೆಸ್ಟ್ ಇಂಡೀಸ್ ಸೆಪ್ಟೆಂಬರ್ 13ರಂದು ಐರ್ಲೆಂಡ್ ವಿರುದ್ಧ ಒಂದು ಏಕದಿನ ಪಂದ್ಯವನ್ನಾಡಲಿದೆ. ನಂತರ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಸರಣಿಯಲ್ಲಿ ಒಂದು ಪಂದ್ಯ ಗೆದ್ದರೂ ವೆಸ್ಟ್ ಇಂಡೀಸ್ ತಂಡಕ್ಕೆ ಅವಕಾಶ ಹೆಚ್ಚಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


