ಕ್ರಿಕೆಟ್

ಮುರಳಿ ವಿಜಯ್, ಕೊಹ್ಲಿ ಭರ್ಜರಿ ಶತಕ: ಬೃಹತ್ ಮೊತ್ತದತ್ತ ಟೀಂ ಇಂಡಿಯಾ

ಪ್ರವಾಸಿ ಶ್ರೀಲಂಕಾ ವಿರುದ್ಧ 3ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಮುರಳಿ ವಿಜಯ್ ಹಾಗೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದು ಟೀಂ...

ಮುರಳಿ ವಿಜಯ್, ಕೊಹ್ಲಿ ಭರ್ಜರಿ ಶತಕ: ಬೃಹತ್ ಮೊತ್ತದತ್ತ ಟೀಂ ಇಂಡಿಯಾ
ಮುರಳಿ ವಿಜಯ್, ಕೊಹ್ಲಿ
Published On :
ನವದೆಹಲಿ: ಪ್ರವಾಸಿ ಶ್ರೀಲಂಕಾ ವಿರುದ್ಧ 3ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಮುರಳಿ ವಿಜಯ್ ಹಾಗೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದು ಟೀಂ ಇಂಡಿಯಾ ಬೃಹತ್ ಮೊತ್ತ ಕಲೆ ಹಾಕುವ ಸೂಚನೆ ನೀಡಿದೆ. 
ಫಿರೋಜ್ ಶಾ ಕೊಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಶಿಖರ್ ಧವನ್ 23 ಹಾಗೂ ಚೇತೇಶ್ವರ ಪೂಜಾರ ಸಹ 23 ರನ್ ಗಳಿಗೆ ಔಟ್ ಆದರು ನಂತರ ಒಂದಾದ ಮುರಳಿ ವಿಜಯ್ ಜೋಡಿ 176 ರನ್ ಕಲೆ ಹಾಕಿದ್ದು ಟೀಂ ಇಂಡಿಯಾ ಮಧ್ಯಾಹ್ನದ ಚಹಾದ ವೇಳೆಗೆ 2 ವಿಕೆಟ್ ನಷ್ಟಕ್ಕೆ 245 ರನ್ ಪೇರಿಸಿದೆ. 
ಶ್ರೀಲಂಕಾ ಪರ ಪೆರೇರಾ ಹಾಗೂ ಘಮಗೆ ತಲಾ 1 ವಿಕೆಟ್ ಪಡೆದಿದ್ದಾರೆ. 
ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಈ ಪಂದ್ಯ ಗೆದ್ದರೂ, ಡ್ರಾ ಆದರೂ ಟೀಂ ಇಂಡಿಯಾಗೆ ಸರಣಿ ಕೈವಶವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.