3ನೇ ಟೆಸ್ಟ್ ಪಂದ್ಯ: 6ನೇ ದ್ವಿಶತಕ ಸಿಡಿಸಿದ ನಾಯಕ ವಿರಾಟ್ ಕೊಹ್ಲಿ; ಮತ್ತೊಂದು ದಾಖಲೆ
ಫಿರೋಜ್ ಶಾ ಕೊಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಭಾರತ-ಲಂಕಾ ನಡುವಿನ 3ನೇ ಟೆಸ್ಟ್ ಪಂದ್ಯದ 2 ನೇ ದಿನದಾಟದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಕೆರಿಯರ್ ನ 6ನೇ ದ್ವಿಶತಕ ಸಿಡಿಸಿದ್ದಾರೆ.

Published On :
ನವದೆಹಲಿ: ಫಿರೋಜ್ ಶಾ ಕೊಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಭಾರತ-ಲಂಕಾ ನಡುವಿನ 3ನೇ ಟೆಸ್ಟ್ ಪಂದ್ಯದ 2ನೇ ದಿನದಾಟದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಕೆರಿಯರ್ ನ 6 ನೇ ದ್ವಿಶತಕ ಸಿಡಿಸಿದ್ದಾರೆ.
238 ಎಸೆತಗಳಲ್ಲಿ ಕೊಹ್ಲಿ ದ್ವಿಶತಕ ಸಿಡಿಸಿದ್ದು, ಟೆಸ್ಟ್ ಇನ್ನಿಂಗ್ಸ್ ನಲ್ಲಿ ಸತತವಾಗಿ 2ನೇ ದ್ವಿಶತಕ ದಾಖಲಿಸಿದ ಎರಡನೇ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ ವಿನೋದ್ ಕಾಂಬ್ಳಿ ಟೆಸ್ಟ್ ಇನ್ನಿಂಗ್ಸ್ ನಲ್ಲಿ ಸತತವಾಗಿ 2ನೇ ದ್ವಿಶತಕ ದಾಖಲಿಸಿದ್ದ ಆಟಗಾರರಾಗಿದ್ದರು.
ಅಷ್ಟೇ ಅಲ್ಲದೇ 6ನೇ ದ್ವಿಶತಕ ದಾಖಲಿಸುವ ಮೂಲಕ ವಿರಾಟ್ ಕೊಹ್ಲಿ, ಟೆಸ್ಟ್ ಫಾರ್ಮೆಟ್ ನಲ್ಲಿ ಅತಿ ಹೆಚ್ಚು ದ್ವಿಶತಕ ದಾಖಲಿಸಿದ ಆಟಗಾರರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ವಿರೇಂದ್ರ ಸೆಹ್ವಾಗ್ ಹಾಗೂ ಸಚಿನ್ ತೆಂಡೂಲ್ಕರ್ 6 ದ್ವಿಶತಕ ದಾಖಲಿಸಿರುವ ಆಟಗಾರರಾಗಿದ್ದಾರೆ. ರಾಹುಲ್ ದ್ರಾವಿಡ್ 5 ದ್ವಿಶತಕ, ಸುನಿಲ್ ಗವಾಸ್ಕರ್ 4 ದ್ವಿಶತಕ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


