ದೆಹಲಿ ಮಾಲಿನ್ಯ: ಶ್ರೀಲಂಕಾ ಆಟಗಾರರ ಹೈಡ್ರಾಮಾಗೆ ಗಂಗೂಲಿ ಬೇಸರ
ಮೂರನೇ ಟೆಸ್ಟ್ ಪಂದ್ಯದ ವೇಳೆ ಶ್ರೀಲಂಕಾ ತಂಡದ ಆಟಗಾರರ ನಡುವಳಿಕೆ ಬೇಸರ ತಂದಿದೆ ಎಂದು ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.

Published On :
ನವದೆಹಲಿ: ಮೂರನೇ ಟೆಸ್ಟ್ ಪಂದ್ಯದ ವೇಳೆ ಶ್ರೀಲಂಕಾ ತಂಡದ ಆಟಗಾರರ ನಡುವಳಿಕೆ ಬೇಸರ ತಂದಿದೆ ಎಂದು ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.
ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ಮೂರನೇ ಟೆಸ್ಟ್ ಪಂದ್ಯ ನಡೆಯುತ್ತಿದ್ದು ನಿನ್ನೆ ಲಂಕಾ ಆಟಗಾರರು ಮಾಲಿನ್ಯ ಸಮಸ್ಯೆ ನೀಡಿ ಪದೇ ಪದೇ ಪಂದ್ಯ ನಡುವೆ ಕಿರಿಕ್ ಮಾಡಿದ್ದು, ಮೈದಾನದಲ್ಲಿ ಫಿಲ್ಡಿಂಗ್ ಮಾಡುವಾಗ ಮಾಸ್ಕ್ ಧರಿಸಿದ್ದ ಲಂಕಾ ಆಟಗಾರರು ಟೀಂ ಇಂಡಿಯಾ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡ ನಂತರ ಬ್ಯಾಟಿಂಗ್ ಆರಂಭಿಸಿದ ಲಂಕಾ ಬ್ಯಾಟ್ಸ್ ಮನ್ ಗಳು ಮಾಸ್ಕ್ ಧರಿಸದೇ ಬಂದಿದ್ದನ್ನು ಗಂಗೂಲಿ ಪ್ರಶ್ನಿಸಿದ್ದಾರೆ.
ದೆಹಲಿಯಲ್ಲಿ ಮಾಲಿನ್ಯದಿಂದ ಕೂಡಿದ ಗಾಳಿ ಇರುವುದರಿಂದ ಲಂಕಾ ಆಟಗಾರರು ಮುಖಕ್ಕೆ ಮಾಸ್ಕ್ ಧರಿಸಿ ಫಿಲ್ಡಿಂಗ್ ಮಾಡಿದ್ದರು. ಇದರ ಬಗ್ಗೆ ಆಡಳಿತ ಮಂಡಳಿಗೆ ದೂರು ಸಹ ನೀಡಿದ್ದರು. ಇನ್ನು ಲಂಕಾ ಆಟಗಾರರ ನಡುವಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ನವದೆಹಲಿNew Delhiಟೀಂ ಇಂಡಿಯಾTeam IndiaSri Lankaಶ್ರೀಲಂಕಾTestಟೆಸ್ಟ್Sourav Gangulyಸೌರವ್ ಗಂಗೂಲಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


