ಕ್ರಿಕೆಟ್

3ನೇ ಟೆಸ್ಟ್: ಭಾರತ 246 ರನ್‌ಗೆ 2ನೇ ಇನ್ನಿಂಗ್ಸ್ ಡಿಕ್ಲೇರ್, ಲಂಕಾ ಗೆಲ್ಲಲು 410 ರನ್ ಗುರಿ

ಪ್ರವಾಸಿ ಶ್ರೀಲಂಕಾ ವಿರುದ್ದದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಲಂಕಾಗೆ ಗೆಲ್ಲಲು 410 ರನ್ ಗಳ ಗುರಿ ನೀಡಿದೆ...

3ನೇ ಟೆಸ್ಟ್: ಭಾರತ 246 ರನ್‌ಗೆ 2ನೇ ಇನ್ನಿಂಗ್ಸ್ ಡಿಕ್ಲೇರ್, ಲಂಕಾ ಗೆಲ್ಲಲು 410 ರನ್ ಗುರಿ
ಟೀಂ ಇಂಡಿಯಾ
Published On :
ನವದೆಹಲಿ: ಪ್ರವಾಸಿ ಶ್ರೀಲಂಕಾ ವಿರುದ್ದದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಲಂಕಾಗೆ ಗೆಲ್ಲಲು 410 ರನ್ ಗಳ ಗುರಿ ನೀಡಿದೆ. 
ದೆಹಲಿಯ ಫಿರೋಜ್ ಶಾ ಕೊಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ 246 ರನ್ ಪೇರಿಸಿ ಡಿಕ್ಲೇರ್ ಮಾಡಿಕೊಂಡಿತು. ಇದರೊಂದಿಗೆ ಲಂಕಾಗೆ 410 ರನ್ ಗಳ ಗುರಿ ನೀಡಿದೆ. 
ಎರಡನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ಪರ ಮುರಳಿ ವಿಜಯ್ 9, ಶಿಖರ್ ಧವನ್ 67, ರಹಾನೆ 10, ಪೂಜಾರ 49, ವಿರಾಟ್ ಕೊಹ್ಲಿ 50 ಹಾಗೂ ರೋಹಿತ್ ಶರ್ಮಾ ಅಜೇಯ 50 ರನ್ ಗಳಿಸಿದ್ದಾರೆ. 
ಮೊದಲ ಇನ್ನಿಂಗ್ಸ್ ನಲ್ಲಿ ಲಂಕಾ 373 ರನ್ ಗಳಿಗೆ ಸರ್ವ ಪತನ ಕಂಡಿತು. ಇದರೊಂದಿಗೆ ಭಾರತ 163 ರನ್ ಗಳ ಮುನ್ನಡೆ ಪಡೆದಿತ್ತು. ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ 5 ವಿಕೆಟ್ ನಷ್ಟಕ್ಕೆ 246 ರನ್ ಪೇರಿಸಿ 2ನೇ ಇನ್ನಿಂಗ್ಸ್ ಅನ್ನು ಡಿಕ್ಲೇರ್ ಮಾಡಿಕೊಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.