3ನೇ ಟೆಸ್ಟ್: ಲಂಕಾಗೆ ಆಘಾತ, ಪಂದ್ಯ ಗೆಲ್ಲಲು ಟೀಂ ಇಂಡಿಯಾಗೆ 7 ವಿಕೆಟ್ ಸಾಕು
ಭಾರತ ವಿರುದ್ಧದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಶ್ರೀಲಂಕಾ 31 ರನ್ ಗಳಿಗೆ ಪ್ರಮುಖ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ...

Published On :
ನವದೆಹಲಿ: ಭಾರತ ವಿರುದ್ಧದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಶ್ರೀಲಂಕಾ 31 ರನ್ ಗಳಿಗೆ ಪ್ರಮುಖ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
ದೆಹಲಿಯ ಫಿರೋಜ್ ಶಾ ಕೊಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್ ನಲ್ಲಿ ಭಾರತ 5 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿದ್ದಾಗ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಇದರೊಂದಿಗೆ ಲಂಕಾಗೆ ಗೆಲ್ಲಲು 410 ರನ್ ಗಳ ಗುರಿ ನೀಡಿತು. ಈ ಮೊತ್ತವನ್ನು ಬೆನ್ನಟ್ಟಿದ ಲಂಕಾ ತಂಡಕ್ಕೆ ಆರಂಭಿಕ ಆಘಾತ ಎದುರಾಗಿದೆ. ನಾಲ್ಕನೇ ದಿನದಾಟದ ಅಂತ್ಯಕ್ಕೆ ಲಂಕಾ 31 ರನ್ ಗಳಿಗೆ ಪ್ರಮುಖ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
ಅಂತಿಮ ಐದನೇ ದಿನದಲ್ಲಿ ಲಂಕಾ ತಂಡ ಪಂದ್ಯ ಗೆಲ್ಲಲು 379 ರನ್ ಗಳನ್ನು ಬಾರಿಸಿಬೇಕಿದೆ. ಇನ್ನು ಟೀಂ ಇಂಡಿಯಾ 7 ವಿಕೆಟ್ ಗಳನ್ನು ಪಡೆದರೇ ಈ ಟೆಸ್ಟ್ ಪಂದ್ಯದಲ್ಲೂ ಜಯ ಸಾಧಿಸಲಿದೆ.
ಎರಡನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ಪರ ಮುರಳಿ ವಿಜಯ್ 9, ಶಿಖರ್ ಧವನ್ 67, ರಹಾನೆ 10, ಪೂಜಾರ 49, ವಿರಾಟ್ ಕೊಹ್ಲಿ 50 ಹಾಗೂ ರೋಹಿತ್ ಶರ್ಮಾ ಅಜೇಯ 50 ರನ್ ಗಳಿಸಿದ್ದಾರೆ.
ಮೊದಲ ಇನ್ನಿಂಗ್ಸ್ ನಲ್ಲಿ ಲಂಕಾ 373 ರನ್ ಗಳಿಗೆ ಸರ್ವ ಪತನ ಕಂಡಿತು. ಇದರೊಂದಿಗೆ ಭಾರತ 163 ರನ್ ಗಳ ಮುನ್ನಡೆ ಪಡೆದಿತ್ತು. ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ 5 ವಿಕೆಟ್ ನಷ್ಟಕ್ಕೆ 246 ರನ್ ಪೇರಿಸಿ 2ನೇ ಇನ್ನಿಂಗ್ಸ್ ಅನ್ನು ಡಿಕ್ಲೇರ್ ಮಾಡಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


