ಕ್ರಿಕೆಟ್

ಭಾರತ-ಲಂಕಾ ನಡುವಿನ 3ನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯ, ಸರಣಿ ಭಾರತ ಕೈವಶ

ಪ್ರವಾಸಿ ಶ್ರೀಲಂಕಾ ಹಾಗೂ ಟೀಂ ಇಂಡಿಯಾ ನಡುವಿನ 3ನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದ್ದು ಸರಣಿ ಭಾರತ ಕೈವಶವಾಗಿದೆ...

ಭಾರತ-ಲಂಕಾ ನಡುವಿನ 3ನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯ, ಸರಣಿ ಭಾರತ ಕೈವಶ
ಟೀಂ ಇಂಡಿಯಾ
Published On :
ನವದೆಹಲಿ: ಪ್ರವಾಸಿ ಶ್ರೀಲಂಕಾ ಹಾಗೂ ಟೀಂ ಇಂಡಿಯಾ ನಡುವಿನ 3ನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದ್ದು ಸರಣಿ ಭಾರತ ಕೈವಶವಾಗಿದೆ. 
ನವದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ. ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 1-0 ಅಂತರದಿಂದ ಜಯ ಗಳಿಸಿದ್ದು ಸರಣಿ ಭಾರತ ಕೈವಶವಾಗಿದೆ. 
ದ್ವಿತೀಯ ಇನ್ನಿಂಗ್ಸ್ ನಲ್ಲಿ ಭಾರತ 5 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿದ್ದಾಗ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಇದರೊಂದಿಗೆ ಲಂಕಾಗೆ ಗೆಲ್ಲಲು 410 ರನ್ ಗಳ ಗುರಿ ನೀಡಿತು. ಈ ಮೊತ್ತವನ್ನು ಬೆನ್ನಟ್ಟಿದ ಲಂಕಾ ತಂಡ ಐದನೇ ದಿನದಾಟದಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 299 ರನ್ ಗಳಿಸಿದ್ದು ಪಂದ್ಯ ಡ್ರಾನಲ್ಲಿ ಅಂತ್ಯವಾಯಿತು. 
ನಾಲ್ಕನೇ ದಿನದಾಟದ ಅಂತ್ಯಕ್ಕೆ ಲಂಕಾ 31 ರನ್ ಗಳಿಗೆ ಪ್ರಮುಖ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ಐದನೇ ದಿನದಾಟದಲ್ಲಿ ಧನಂಜಯ್ ಡಿ ಸಿಲ್ವಾ ಭರ್ಜರಿ ಶತಕ ಹಾಗೂ ರೆಸೇನ್ ಸಿಲ್ವಾ 74 ರನ್ ಪೇರಿಸಿ ತಂಡವನ್ನು ಸೋಲಿನ ದವಡೆಯಿಂದ ಪಾರು ಮಾಡಿದರು. 
ಎರಡನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ಪರ ಮುರಳಿ ವಿಜಯ್ 9, ಶಿಖರ್ ಧವನ್ 67, ರಹಾನೆ 10, ಪೂಜಾರ 49, ವಿರಾಟ್ ಕೊಹ್ಲಿ 50 ಹಾಗೂ ರೋಹಿತ್ ಶರ್ಮಾ ಅಜೇಯ 50 ರನ್ ಗಳಿಸಿದ್ದಾರೆ. 
ಮೊದಲ ಇನ್ನಿಂಗ್ಸ್ ನಲ್ಲಿ ಲಂಕಾ 373 ರನ್ ಗಳಿಗೆ ಸರ್ವ ಪತನ ಕಂಡಿತು. ಇದರೊಂದಿಗೆ ಭಾರತ 163 ರನ್ ಗಳ ಮುನ್ನಡೆ ಪಡೆದಿತ್ತು. ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ 5 ವಿಕೆಟ್ ನಷ್ಟಕ್ಕೆ 246 ರನ್ ಪೇರಿಸಿ 2ನೇ ಇನ್ನಿಂಗ್ಸ್ ಅನ್ನು ಡಿಕ್ಲೇರ್ ಮಾಡಿಕೊಂಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.