ಕ್ರಿಕೆಟ್

1ನೇ ಏಕದಿನ ಪಂದ್ಯ: ಭಾರತಕ್ಕೆ ಆರಂಭಿಕ ಆಘಾತ, ಧವನ್ 0, ರೋಹಿತ್ 2 ರನ್‌ಗೆ ಔಟ್

ಟೀಂ ಇಂಡಿಯಾ ಹಾಗೂ ಶ್ರೀಲಂಕಾ ನಡುವಿನ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಗಿದೆ...

1ನೇ ಏಕದಿನ ಪಂದ್ಯ: ಭಾರತಕ್ಕೆ ಆರಂಭಿಕ ಆಘಾತ, ಧವನ್ 0, ರೋಹಿತ್ 2 ರನ್‌ಗೆ ಔಟ್
ಧವನ್-ರೋಹಿತ್
Published On :
ಧರ್ಮಶಾಲಾ: ಟೀಂ ಇಂಡಿಯಾ ಹಾಗೂ ಶ್ರೀಲಂಕಾ ನಡುವಿನ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಗಿದೆ. 
ಧರ್ಮಶಾಲಾದಲ್ಲಿ ನಡೆಯುತ್ತಿರುವ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 3 ರನ್ ಗೆ ಪ್ರಮುಖ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಆರಂಭಿಕರಾಗಿ ಕಣಕ್ಕೀಳಿದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಶೂನ್ಯಕ್ಕೆ ಔಟಾದರೇ ನಾಯಕ ರೋಹಿತ್ ಶರ್ಮಾ 2 ರನ್ ಗಳಿಗೆ ಔಟ್ ಆಗಿ ಪೆವಿಲಿಯನ್ ಸೇರಿದರು. ನಂತರ ಬಂದ ದಿನೇಶ್ ಕಾರ್ತಿಕ್ ಸಹ ಶೂನ್ಯಕ್ಕೆ ಔಟಾದರು
ಸದ್ಯ ಭಾರತ 9 ಓವರ್ ಮುಕ್ತಾಯಕ್ಕೆ 3 ವಿಕೆಟ್ ಕಳೆದುಕೊಂಡು 8 ರನ್ ಗಳಿಸಿ ಆಡುತ್ತಿದೆ. ಭಾರತ ಪರ ಶ್ರೇಯಸ್ ಅಯ್ಯರ್ ಮನೀಶ್ ಪಾಂಡೆ ಬ್ಯಾಟಿಂಗ್ ಮಾಡುತ್ತಿದ್ದಾರೆ. 
ಧರ್ಮಶಾಲಾ ಮೈದಾನದಲ್ಲಿ ಬಹುತೇಕ ಚೇಸಿಂಗ್ ಮಾಡುವ ತಂಡವೇ ಗೆಲುವು ಸಾಧಿಸಿರುವುದರಿಂದ ಟೀಂ ಇಂಡಿಯಾ ಎಚ್ಚರಿಕೆಯಿಂದ ಆಡಬೇಕಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.