ಲಂಕಾ ವಿರುದ್ಧ ಸರಣಿ ಗೆದ್ದರೆ ಟೀಂ ಇಂಡಿಯಾ ವಿಶ್ವದ ನಂ.1 ತಂಡ!
ಪ್ರವಾಸಿ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗುತ್ತಿದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ಟೀಂ ಇಂಡಿಯಾ...

Published On :
ಧರ್ಮಶಾಲಾ: ಪ್ರವಾಸಿ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗುತ್ತಿದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ಟೀಂ ಇಂಡಿಯಾ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ರ್ಯಾಂಕಿಂಗ್ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ ಮತ್ತು ಟೀಂ ಇಂಡಿಯಾ ತಲಾ 120 ಅಂಕಗಳನ್ನು ಗಳಿಸುವುದರೊಂದಿಗೆ ಅಗ್ರಸ್ಥಾನವನ್ನು ಹಂಚಿಕೊಂಡಿವೆ. ಈ ಹಿನ್ನೆಲೆಯಲ್ಲಿ ಶ್ರೀಲಂಕಾ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿದರೆ ಟೀಂ ಇಂಡಿಯಾ ಅಂಕಗಳನ್ನು ಮುನ್ನಡೆ ಸಾಧಿಸುತ್ತದೆ.
ಲಂಕಾ ಬಳಿಕ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದು ಆಫ್ರಿಕಾ ವಿರುದ್ಧ 5 ಏಕದಿನ ಪಂದ್ಯಗಳನ್ನು ಆಡಲಿದೆ. ಹೀಗಾಗಿ ಲಂಕಾ ವಿರುದ್ಧ ಸರಣಿ ಗೆದ್ದರು ಮುಂಬರುವ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲೂ ಗೆಲುವು ಸಾಧಿಸುವುದು ಅನಿವಾರ್ಯ.
ಈ ಹಿಂದೆ ಲಂಕಾ ಪ್ರವಾಸಕೈಗೊಂಡಿದ್ದ ಭಾರತ ಏಕದಿನ ಸರಣಿಯನ್ನು ವೈಟ್ ವಾಶ್ ಮಾಡಿತ್ತು. ಗೆಲ್ಲುವಿನ ಹುಮ್ಮಸ್ಸಿನಲ್ಲಿರುವ ಭಾರತ ತಂಡ ಸರಣಿ ಗೆಲ್ಲುವ ಫೆವರೆಟ್ ತಂಡವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


