ಏಕದಿನ ಸರಣಿ: ಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು
ಪ್ರವಾಸಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ಶಿಖರ್ ಧವನ್ ಅಮೋಘ ಶತಕ ಹಾಗೂ ಶ್ರೇಯಸ್ ಅಯ್ಯರ್ ಅವರ...

Published On :
ವಿಶಾಖಪಟ್ಟಣ: ಪ್ರವಾಸಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ಶಿಖರ್ ಧವನ್(100) ಅಮೋಘ ಶತಕ ಹಾಗೂ ಶ್ರೇಯಸ್ ಅಯ್ಯರ್ ಅವರ ಆಕರ್ಷಕ ಅರ್ಧಶತಕ(65)ದ ನೆರವಿನೊಂದಿಗೆ 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ.
ಡಾ.ವೈ.ಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದ ಟೀಂ ಇಂಡಿಯಾ, ಮೊದಲು ಬ್ಯಾಟಿಂಗ್ ಮಾಡಿದ ಲಂಕಾ ತಂಡವನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಂಕಾ 215 ರನ್ ಗಳಿಗೆ ತನ್ನ ಎಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿತು. ಸರಣಿ ಗೆಲ್ಲಲು 216ರನ್ ಗಳು ಗುರಿ ಬೆನ್ನತ್ತಿದ ಭಾರತ, ಧವನ್ ಶತಕ ಹಾಗೂ ಅಯ್ಯರ್ ಸಮಯೋಚಿತ ಅರ್ಧಶತಕದ ನೆರವಿನಿಂದ 32.1 ಓವರ್‌ಗಳಲ್ಲೇ ಎರಡು ವಿಕೆಟ್ ನಷ್ಟಕ್ಕೆ ಗೆಲುವಿನ ಗುರಿ ತಲುಪಿತು.
ಭಾರತ ಪರ ರೋಹಿತ್ ಶರ್ಮಾ 7, ಧವನ್ ಅಜಯ 100 ರನ್, ಶ್ರೇಯಸ್ ಅಯ್ಯರ್ 65, ಕಾರ್ತಿಕ್ ಅಜಯ 26 ರನ್ ಗಳಿಸಿದರು.
ಶ್ರೀಲಂಕಾ ಪರ ಧನಂಜಯ, ಪೆರೆರಾ ತಲಾ 1 ವಿಕೆಟ್ ಪಡೆದರು.
ಲಂಕಾಗೆ ಆರಂಭಿಕ ಆಘಾತ ಎದುರಾದರು ಉಪುಲ್ ತರಂಗ ಹಾಗೂ ಸಮರವಿಕ್ರಮ 121 ರನ್ ಗಳ ಜತೆಯಾಟ ನೀಡಿದ್ದು ತಂಡ ಬೃಹತ್ ಮೊತ್ತ ಕಲೆಹಾಕುವ ಸೂಚನೆ ನೀಡಿತ್ತು. ಆದರೆ ಯಜುವೇಂದ್ರ ಚಹಾಲ್ ಮತ್ತು ಕುಲದೀಪ್ ಯಾದವ್ ಮಾರಕ ದಾಳಿಗೆ ಲಂಕಾ ಪಡೆ ತತ್ತರಿಸಿತು.
ಲಂಕಾ ಪರ ಗುಣತಿಲಕ 13, ಉಪುಲ್ ತರಂಗ 95, ಸಮರವಿಕ್ರಮ 42, ಮ್ಯಾಥ್ಯೂಸ್ 17, ಡಿಕ್ವೇಲ್ಲಾ 8, ಗುಣರತ್ನೆ 17, ಪೆರೇರಾ 6 ರನ್ ಗಳಿಸಿ ಔಟಾದರು.
ಭಾರತ ಪರ ಯಜುವೇಂದ್ರ ಚಹಾಲ್ ಹಾಗೂ ಕುಲದೀಪ್ ಯಾದವ್ ತಲಾ 3, ಹಾರ್ದಿಕ್ ಪಾಂಡ್ಯ 2, ಬುಮ್ರಾ ಮತ್ತು ಭುವನೇಶ್ವರ್ ಕುಮಾರ್ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


