2ನೇ ಟಿ20 ಪಂದ್ಯ: ಶ್ರೀಲಂಕಾ ವಿರುದ್ಧ ಭಾರತಕ್ಕೆ 88 ರನ್ ಗಳ ಭರ್ಜರಿ ಜಯ
ಶ್ರೀಲಂಕಾ ವಿರುದ್ಧ ಇಂದೋರ್ ನಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ 88 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

Published On :
ಇಂದೋರ್: ಶ್ರೀಲಂಕಾ ವಿರುದ್ಧ ಇಂದೋರ್ ನಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ 88 ರನ್ ಗಳ ಭರ್ಜರಿ ಜಯ ದಾಖಲಿಸಿದೆ.
ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲಿ ಶ್ರೀಲಂಕಾ ವಿರುದ್ಧ ಪಾರಮ್ಯ ಮೆರೆದ ಟೀಂ ಇಂಡಿಯಾ ಅರ್ಹವಾಗಿಯೇ ಪಂದ್ಯ ಜಯಿಸಿತು. ಭಾರತ ನೀಡಿದ 261 ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ಶ್ರೀಲಂಕಾ ಕೇವಲ 17.2 ಓವರ್ ಗಳಲ್ಲಿ 172 ರನ್ ಗಳಿಸಿ ಆಲ್ ಔಟ್ ಆಯಿತು. ಶ್ರೀಲಂಕಾ ಪರ ಕುಸಾಲ್ ಪೆರೇರಾ (77 ರನ್), ಉಪುಲ್ ತರಂಗಾ (47) ಉತ್ತಮ ಪ್ರದರ್ಶನ ನೀಡಿದರು. ಆದರೆ ಪೆರೇರಾ ಔಟ್ ಆದ ಬಳಿಕ ನಿಗದಿತ ಸಮಯದಲ್ಲಿ ಲಂಕಾದ ವಿಕೆಟ್ ಉರುಳುತ್ತಾ ಹೋಗಿದ್ದು, ಆ ತಂಡದ ಸೋಲಿಗೆ ಪ್ರಮುಖ ಕಾರಣವಾಯಿತು.
ಇನ್ನು ಲಂಕಾ ದಾಂಡಿಗರ ವಿರುದ್ಧ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ ಟೀಂ ಇಂಡಿಯಾ ಬೌಲರ್ ಗಳು ನಿಗದಿತವಾಗಿ ವಿಕೆಟ್ ಪಡೆಯುವ ಮೂಲಕ ಲಂಕಾ ಪತನಕ್ಕೆ ಕಾರಣರಾದರು. ಪ್ರಮುಖವಾಗಿ ಚಾಹಲ್ 4 ವಿಕೆಟ್ ಪಡೆದರೆ, ಕುಲದೀಪ್ ಯಾದವ್ 3 ವಿಕೆಟ್ ಪಡೆದರು. ಉನಾದ್ಕತ್ ಮತ್ತು ಪಾಂಡ್ಯಾ ತಲಾ 1 ವಿಕೆಟ್ ಪಡೆದರು.
ಈ ಪಂದ್ಯದ ಮೂಲಕ 3 ಪಂದ್ಯಗಳ ಟಿ20 ಸರಣಿಯನ್ನು ಭಾರತ 2-0 ಅಂತರದಲ್ಲಿ ಈಗಾಗಲೇ ಜಯಿಸಿದೆ.
ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ನಡೆಸಿದ್ದ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ ರೋಹಿತ್ ಶರ್ಮಾ ಭರ್ಜರಿ ಶತಕ ಹಾಗೂ ಕೆಎಲ್ ರಾಹುಲ್ ಅವರ ಅಮೋಘ ಅರ್ಧಶತಕದ ನೆರವಿನಿಂದ 5 ವಿಕೆಟ್ ನಷ್ಟಕ್ಕೆ 260 ರನ್ ಗಳಿಸಿತ್ತು. 3ನೇ ವಿಕೆಟ್ ನಲ್ಲಿ ಧೋನಿ ಒಂದಷ್ಟು ಉತ್ತಮ ಆಟದ ಪ್ರದರ್ಶನ ನೀಡಿದರು. ಇನ್ನಿಂಗ್ಸ್ ಕೊನೆಯಲ್ಲಿ ಲಂಕಾ ತಂಡ ಭಾರತದ 3 ವಿಕೆಟ್ ಗಳನ್ನು ತ್ವರಿತಗತಿಯಲ್ಲಿ ಪಡೆಯುವಲ್ಲಿ ಯಶಸ್ವಿಯಾಯಿತಾದರೂ ಭಾರತದ ಬೃಹತ್ ಮೊತ್ತಕ್ಕೆ ಅಡ್ಡಿಯಾಗಲು ಸಾಧ್ಯವಾಗಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


