ಲಂಕಾ ವಿರುದ್ಧ ಭಾರತಕ್ಕೆ ಮತ್ತೊಂದು ವೈಟ್ ವಾಶ್; 3ನೇ ಟಿ20 ಪಂದ್ಯದಲ್ಲಿ ಭರ್ಜರಿ ಗೆಲುವು
ಲಂಕಾ ವಿರುದ್ಧ ಭಾರತಕ್ಕೆ ಮತ್ತೊಂದು ವೈಟ್ ವಾಶ್; 3ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಗೆಲುವು

Published On :
ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಪ್ರವಾಸಿ ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ತಂಡ ಐದು ವಿಕೆಟ್ ಗಳ ಭರ್ಜರಿ ಜಯಸಾಧಿಸಿತು. ಅಂತೆಯೇ 3-0 ಅಂತರದಲ್ಲಿ ಸರಣಿ ಗೆಲ್ಲುವ ಮೂಲಕ ಲಂಕಾ ವಿರುದ್ಧ ಮತ್ತೊಂದು ಸರಣಿಯನ್ನು ವೈಟ್ ವಾಶ್ ಮಾಡಿತು.
ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಪ್ರವಾಸಿ ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ತಂಡ ಐದು ವಿಕೆಟ್ ಗಳ ಭರ್ಜರಿ ಜಯಸಾಧಿಸಿತು. ಅಂತೆಯೇ 3-0 ಅಂತರದಲ್ಲಿ ಸರಣಿ ಗೆಲ್ಲುವ ಮೂಲಕ ಲಂಕಾ ವಿರುದ್ಧ ಮತ್ತೊಂದು ಸರಣಿಯನ್ನು ವೈಟ್ ವಾಶ್ ಮಾಡಿತು.
ಟಾಸ್ ಗೆದ್ದು ಲಂಕಾ ತಂಡಕ್ಕೆ ಭಾರತ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿತು. ಮೊದಲು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ಭಾರತೀಯ ಬೌಲರ್ ಗಳ ಶಿಸ್ತಿನ ಬೌಲಿಂಗ್ ನಿಂದಾಗಿ ರನ್ ಗಳಿಸಲು ಪರದಾಡಿತು. ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಶ್ರೀಲಂಕಾ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 135 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಲಂಕಾ ಪರ ಗುಣರತ್ನೆ ಗಳಿಸಿದ 36 ರನ್ ಗಳೇ ಆ ತಂಡ ಆಟಗಾರನೊಬ್ಬನ ಗರಿಷ್ಠ ರನ್ ಗಳಿಕೆಯಾಗಿತ್ತು. ಭಾರತದ ಪರ ಉನಾದ್ಕತ್ ಮತ್ತು ಪಾಂಡ್ಯಾ ತಲಾ 2 ವಿಕೆಟ್ ಪಡೆದರೆ, ಸುಂದರ್, ಸಿರಾಜ್ ಮತ್ತು ಕುಲದೀಪ್ ಯಾದವ್ ತಲಾ 1 ವಿಕೆಟ್ ಪಡೆದರು.
ಲಂಕಾ ನೀಡಿದ 136ರನ್ ಗಳ ಗುರಿ ಬೆನ್ನುಹತ್ತಿದ ಭಾರತಕ್ಕೆ ಕಳೆದ ಪಂದ್ಯದ ಹೀರೋ ರೋಹಿತ್ ಶರ್ಮಾ ಆಸೆಯಾಗುತ್ತಾರೆ ಎನ್ನುವಾಗಲೇ ರೋಹಿತ್ 27 ರನ್ ಗಳಿಸಿ ಔಟ್ ಆದರು. ಬಳಿಕ ಶ್ರೇಯಸ್ ಅಯ್ಯರ್ ಮತ್ತು ಮನೀಷ್ ಪಾಂಡೆ ಜೋಡಿ ಭಾರತದ ಇನ್ನಿಂಗ್ಸ್ ಚುರುಕು ನೀಡಿದರು. ಅಯ್ಯರ್ 30 ರನ್ ಗಳಿಸಿ ಔಟ್ ಆದರೆ, ಪಾಂಡೆ ಕೂಡ 32 ರನ್ ಗಳಿಸಿ ನಿರ್ಗಮಿಸಿದರು. ಈ ಹಂತದಲ್ಲಿ ಜೊತೆ ಗೂಡಿದ ಧೋನಿ ಹಾಗೂ ದಿನೇಶ್ ಕಾರ್ತಿಕ್ ಸಮಯೋಚಿತ ಆಟದ ಪ್ರದರ್ಶನ ನೀಡಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಅಂತಿಮವಾಗಿ ಭಾರತ ತಂಡ ಇನ್ನೂ 4 ಎಸೆತಗಳು ಬಾಕಿ ಇರುವಂತೆಯೇ 5 ವಿಕೆಟ್ ಕಳೆದುಕೊಂಡು 139 ರನ್ ಗಳಿಸಿ ಪಂದ್ಯ ಜಯಿಸಿತು.
ಅಂತೆಯೇ 3 ಪಂದ್ಯಗಳ ಟಿ20 ಸರಣಿಯನ್ನು 3-0 ಅಂತರದಲ್ಲಿ ಗೆಲ್ಲುವ ಮೂಲಕ ಲಂಕಾ ವಿರುದ್ಧ ಮತ್ತೊಂದು ವೈಟ್ ವಾಶ್ ಸಾಧನೆ ಮಾಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Mumbaiಮುಂಬೈಟಿ20Wankhede StadiumT20Iವಾಂಖೆಡೆ ಕ್ರೀಡಾಂಗಣIndia Vs Srilankaಭಾರತ ವರ್ಸಸ್ ಶ್ರೀಲಂಕಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


