ಕ್ರಿಕೆಟ್

ಲಂಕಾ ವೈಟ್ ವಾಶ್ ನಂತರ ಮೈದಾನದಲ್ಲಿ ಕ್ರಿಸ್ ಮಸ್ ಆಚರಿಸಿದ ಟೀಂ ಇಂಡಿಯಾ ಆಟಗಾರರು

ಪ್ರವಾಸಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಯನ್ನು ವೈಟ್ ವಾಶ್ ಮಾಡಿದ ನಂತರ ಮೈದಾನದಲ್ಲಿ ಟೀಂ ಇಂಡಿಯಾ ಆಟಗಾರರು ಸಾಂತ ಕ್ಲಾಸ್ ಕ್ಯಾಪ್ ಧರಿಸಿ ಕ್ರಿಸ್...

ಲಂಕಾ ವೈಟ್ ವಾಶ್ ನಂತರ ಮೈದಾನದಲ್ಲಿ ಕ್ರಿಸ್ ಮಸ್ ಆಚರಿಸಿದ ಟೀಂ ಇಂಡಿಯಾ ಆಟಗಾರರು
ಟೀಂ ಇಂಡಿಯಾ
Published On :
ಮುಂಬೈ: ಪ್ರವಾಸಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಯನ್ನು ವೈಟ್ ವಾಶ್ ಮಾಡಿದ ನಂತರ ಮೈದಾನದಲ್ಲಿ ಟೀಂ ಇಂಡಿಯಾ ಆಟಗಾರರು ಸಾಂತ ಕ್ಲಾಸ್ ಕ್ಯಾಪ್ ಧರಿಸಿ ಕ್ರಿಸ್ ಮಸ್ ಆಚರಿಸಿದರು. 
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಲಂಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಐದು ವಿಕೆಟ್ ಗಳಿಂದ ಜಯ ಗಳಿಸಿ ಲಂಕಾ ತಂಡ ವಿರುದ್ಧ ವೈಟ್ ವಾಶ್ ಗೆಲುವು ಸಾಧಿಸಿತು. ನಂತರ ಕ್ರಿಸ್ ಮಸ್ ಹಬ್ಬದ ಹಿನ್ನಲೆಯಲ್ಲಿ ಸಾಂತ ಕ್ಲಾಸ್ ಕ್ಯಾಪ್ ಧರಿಸಿ ಮೈದಾನದಲ್ಲಿ ಸಂಭ್ರಮಿಸಿದರು. 
Story image
ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯ, ಮನೀಶ್ ಪಾಂಡೆ ಸೇರಿದಂತೆ ಇತರ ಇತರ ಆಟಗಾರರು ಸಾಂತ ಕ್ಲಾಸ್ ಕ್ಯಾಪ್ ಧರಿಸಿದ್ದರು. 
ಲಂಕಾ ವಿರುದ್ಧದ ಮೂರು ಟಿ20 ಪಂದ್ಯದಲ್ಲೂ ಭಾರತ ಗೆಲುವಿನ ನಗೆ ಬೀರಿದೆ. ಕಟಕ್ ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ 93 ರನ್ ಹಾಗೂ ಇಂದೋರ್ ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ 88 ರನ್ ನಿಂದ ಗೆಲುವು ಸಾಧಿಸಿತ್ತು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.