ಕ್ರಿಕೆಟ್

ನಾವು ಯಾರಿಗೂ ಏನನ್ನೂ ಸಾಧಿಸಿ ತೋರಿಸಬೇಕಿಲ್ಲ: ವಿರಾಟ್ ಕೊಹ್ಲಿ

ಕ್ರಿಕೆಟ್ ಸರಣಿಗಾಗಿ ದಕ್ಷಿಣ ಆಫ್ರಿಕಾಗೆ ಟೀಂ ಇಂಡಿಯಾ ಪ್ರವಾಸ ಕೈಗೊಳ್ಳಲಿದ್ದು ಇದಕ್ಕೂ ಮುನ್ನ ಮಾತನಾಡಿದ ತಂಡದ ನಾಯಕ ವಿರಾಟ್ ಕೊಹ್ಲಿ ನಾವು ಯಾರಿಗೂ...

ನಾವು ಯಾರಿಗೂ ಏನನ್ನೂ ಸಾಧಿಸಿ ತೋರಿಸಬೇಕಿಲ್ಲ: ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
Published On :
ಮುಂಬೈ: ಕ್ರಿಕೆಟ್ ಸರಣಿಗಾಗಿ ದಕ್ಷಿಣ ಆಫ್ರಿಕಾಗೆ ಟೀಂ ಇಂಡಿಯಾ ಪ್ರವಾಸ ಕೈಗೊಳ್ಳಲಿದ್ದು ಇದಕ್ಕೂ ಮುನ್ನ ಮಾತನಾಡಿದ ತಂಡದ ನಾಯಕ ವಿರಾಟ್ ಕೊಹ್ಲಿ ನಾವು ಯಾರಿಗೂ ಏನನ್ನೂ ಸಾಧಿಸಿ ತೋರಿಸಬೇಕಿಲ್ಲ. ನಮ್ಮ ಜವಾಬ್ದಾರಿ ಏನ್ನು ಎನ್ನುವುದು ಚೆನ್ನಾಗಿ ಗೊತ್ತಿದೆ ಎಂದು ಹೇಳಿದರು. 
ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ವಿದೇಶದ ಸುದೀರ್ಘ ಸರಣಿಯಲ್ಲಿ ಭಾರತ ಗೆದ್ದಿಲ್ಲ ಎನ್ನುವ ಪ್ರಶ್ನೆ ಎದುರಾದಾಗ ಇದಕ್ಕೆ ವಿರಾಟ್ ಕೊಹ್ಲಿ ಖಾರವಾಗಿಯೇ ಪ್ರತಿಕ್ರಿಯಿಸಿದರು. ಸದ್ಯ ನಾವು ಅತ್ಯುತ್ತಮ ಫಾರ್ಮ್ ನಲ್ಲಿದ್ದೇವೆ. ಪ್ರತಿ ಸಲವೂ ವಿದೇಶ ಪ್ರವಾಸಕ್ಕೆ ತೆರಳಿದಾಗ ಎದುರಾಗುವ ಇಂತಹ ನಿಮ್ಮ ಪ್ರಶ್ನೆಯಿಂದಲೇ ನಾವು ಒತ್ತಡಕ್ಕೆ ಒಳಗಾಗುತ್ತೇವೆ. ಇದರಿಂದಾಗಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ ಎಂದರು. 
ಈ ಸಲ ಪ್ರವಾಸದಲ್ಲಿ ಹಾಗಾಗುವುದಿಲ್ಲ. ಮುಕ್ತ, ಒತ್ತಡರಹಿತವಾಗಿ ಸರಣಿಗೆ ತೆರಳುತ್ತಿದ್ದೇವೆ. ಸರಣಿ ಗೆಲುವಿಗೆ ಶೇಕಡ 100ರಷ್ಟು ಪ್ರಯತ್ನ ನಡೆಯಲಿದ್ದೇವೆ ಎಂದು ವಿರಾಟ್ ಕೊಹ್ಲಿ ತಿಳಿಸಿದರು. 
ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ನೆಲದಲ್ಲಿ ಮೂರು ಟೆಸ್ಟ್ ಪಂದ್ಯಗಳ ಸರಣಿ, ಆರು ಪಂದ್ಯಗಳ ಏಕದಿನ ಸರಣಿ ಹಾಗೂ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಒಟ್ಟಾರೆ ಎರಡು ತಂಡಗಳಿಗೂ ಇದು ಪ್ರತಿಷ್ಠೆಯ ಕದನ. ದಕ್ಷಿಣ ಆಫ್ರಿಕಾ ತವರಲ್ಲಿ ಬಲಿಷ್ಠ. ಭಾರತ ತನ್ನ ನೆಲದಲ್ಲಿ ಲಂಕಾವನ್ನು ಸುಲಭವಾಗಿ ಮಣಿಸಿದಂತೆ ಹರಿಣಗಳನ್ನು ಕಟ್ಟಿ ಹಾಕುವುದು ಕಷ್ಟ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.