ಕ್ರಿಕೆಟ್

ಅಂತಾರಾಷ್ಟ್ರೀಯ ಟಿ20ಯಲ್ಲಿ ಚೊಚ್ಚಲ ಅರ್ಧಶತಕ ಸಿಡಿಸಿದ ಧೋನಿ

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಅಂತಿಮ ಹಾಗೂ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿ ಸರಣಿ ಕೈವಶ ಮಾಡಿಕೊಂಡಿತು...

ಅಂತಾರಾಷ್ಟ್ರೀಯ ಟಿ20ಯಲ್ಲಿ ಚೊಚ್ಚಲ ಅರ್ಧಶತಕ ಸಿಡಿಸಿದ ಧೋನಿ
ಎಂಎಸ್ ಧೋನಿ
Published On :
ಬೆಂಗಳೂರು: ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಅಂತಿಮ ಹಾಗೂ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿ ಸರಣಿ ಕೈವಶ ಮಾಡಿಕೊಂಡಿತು. 
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಚೊಚ್ಚಲ ಅರ್ಧ ಶತಕ ಸಿಡಿಸಿದರು. 36 ಎಸೆತಗಳಲ್ಲಿ 2 ಸಿಕ್ಸರ್, 5 ಬೌಂಡರಿಯೊಂದಿಗೆ 56 ರನ್ ಸಿಡಿಸಿದ್ದು ಟೀಂ ಇಂಡಿಯಾ ರನ್ ಗತಿ ಏರಲು ಸಾಧ್ಯವಾಯಿತು. 
ಧೋನಿ ತಮ್ಮ 76ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ. 6 ಟಿ20 ವಿಶ್ವಕಪ್ ಟೂರ್ನಿಗಳಿಗೆ ಭಾರತ ತಂಡದ ಸಾರಥ್ಯ ವಹಿಸಿದ್ದ ಧೋನಿ ಅವರ ವೈಯಕ್ತಿಕ ಶ್ರೇಷ್ಠ ಮೊತ್ತ ಇದುವರೆಗೂ ಕೇವಲ 48 ರನ್ ಗಳಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.