ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂಗ್ಲೆಂಡ್-ಭಾರತ ನಡುವಿನ ಟಿ20 ಸರಣಿಯ ನಿರ್ಣಾಯಕ ಪಂದ್ಯ ನಡೆಯಿತು. ಈ ಪಂದ್ಯವನ್ನು ಟೀ ಇಂಡಿಯಾ ಗೆಲ್ಲುವ...

Published On :
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂಗ್ಲೆಂಡ್-ಭಾರತ ನಡುವಿನ ಟಿ20 ಸರಣಿಯ ನಿರ್ಣಾಯಕ ಪಂದ್ಯ ನಡೆಯಿತು. ಈ ಪಂದ್ಯವನ್ನು ಟೀ ಇಂಡಿಯಾ ಗೆಲ್ಲುವ ಮೂಲಕ ಸರಣಿ ಕೈವಶ ಮಾಡಿಕೊಂಡಿತು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದಾಖಲಾದ ದಾಖಲೆಗಳು:
* ಟೀಂ ಇಂಡಿಯಾದ ಬೌಲರ್ ಗಳು ಕೊನೆ 8 ರನ್ ಗೆ ಇಂಗ್ಲೆಂಡ್ ನ 8 ವಿಕೆಟ್ ಪಡೆದಿದ್ದು, ದಾಖಲೆಯಾಗಿದೆ.
* ಟೀಂ ಇಂಡಿಯಾ ಆಟಗಾರನೊಬ್ಬ ಅಂತಾರಾಷ್ಟ್ರೀಯ ಟಿ20 ಪಂದ್ಯವೊಂದರಲ್ಲಿ 6 ವಿಕೆಟ್ ಕಿತ್ತ ಸಾಧನೆ ಮಾಡಿದರು. ಐಪಿಎಲ್ ಫ್ರಾಂಚೈಸಿಯ ಆರ್ಸಿಬಿ ತಂಡದಲ್ಲಿ ಆಡುವ ಯಜುವೇಂದ್ರ ಚಹಾಲ್ ತಮ್ಮ ತವರು ನೆಲದಲ್ಲಿ ಈ ಸಾಧನೆ ಮಾಡಿದರು.
* 202 ರನ್ ಚಿನ್ನಸ್ವಾಮಿಯಲ್ಲಿ ನಡೆದ ಅಂತಾರಾಷ್ಟ್ರೀಯ ಟಿ20 ಪಂದ್ಯಗಳ ಪೈಕಿ ದಾಖಲಾದ ಅಧಿಕ ಮೊತ್ತ ಇದಾಗಿದೆ. ಇದಕ್ಕೂ ಮೊದಲು ಕಳೆದ ವರ್ಷ ನಡೆದ ಟಿ20 ವಿಶ್ವಕಪ್ ಟೂರ್ನಿ ವೇಳೆ ಆಸ್ಟ್ರೇಲಿಯಾ ತಂಡ ಬಾಂಗ್ಲಾದೇಶ ವಿರುದ್ಧ 157 ರನ್ ಗಳಿಸಿದ್ದೇ ಅಧಿಕ ಮೊತ್ತವಾಗಿತ್ತು.
ವಿಶೇಷತೆ:
* ಟೀಂ ಇಂಡಿಯಾ ಪರ 19ನೇ ವಯಸ್ಸಿಗೆ ಟಿ20 ಪಂದ್ಯವಾಡಿದ ಕಿರಿಯ ಆಟಗಾರ ಎನ್ನುವ ಗೌರವಕ್ಕೆ ರಿಷಭ್ ಪಂತ್ ಭಾಜನರಾದರು.
* ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯವಾಡಿದ ರಾಜ್ಯ ಮೊದಲ ಆಟಗಾರ ಎಂಬ ಹಿರಿಮೆಗೆ ಕೆಎಲ್ ರಾಹುಲ್ ಪಾತ್ರರಾಗಿದ್ದಾರೆ. ಇನ್ನು ಮನೀಶ್ ಪಾಂಡೆಗೆ ವಿಶ್ರಾಂತಿ ನೀಡಿದ್ದರಿಂದ ಅವರ ನೋಡಲು ಸಾಧ್ಯವಾಗಿಲ್ಲ.
* ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಇದು ಸಂಭ್ರಮದ ಕ್ಷಣ. ಸಬ್ ಏರ್ ಸಿಸ್ಟಮ್ ಅಳವಡಿಸಿದ ನಂತರ ಇಲ್ಲಿ ನಡೆಯುತ್ತಿರುವ ಮೊದಲ ಅಂತಾರಾಷ್ಟ್ರೀಯ ಪಂದ್ಯ. ಈ ವ್ಯವಸ್ಥೆ ಇರುವ ವಿಶ್ವದ ಮೊದಲ ಹಾಗೂ ಏಕೈಕ ಕ್ರೀಡಾಂಗಣ ಎಂಬ ಹಿರಿಮೆ ಚಿನ್ನಸ್ವಾಮಿ ಮೈದಾನಕ್ಕೀದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruಟೀಂ ಇಂಡಿಯಾTeam IndiaChinnaswamy Stadiumಚಿನ್ನಸ್ವಾಮಿ ಕ್ರೀಡಾಂಗಣCricket Offbeatಕ್ರಿಕೆಟ್ ಸ್ವಾರಸ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


