ಐಪಿಎಲ್ ಸ್ಪಾಟ್ ಫಿಕ್ಸಿಂಗ್: ಭಾರಿ ಸುದ್ದಿಗೆ ಗ್ರಾಸವಾದ ಆಕಾಶ್ ಚೋಪ್ರಾ, ಶ್ರೀಶಾಂತ್ ಟ್ವಿಟರ್ ವಾಗ್ಯುದ್ಧ
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಿಂದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಉಳಿದಿರುವ ಶ್ರೀಶಾಂತ್ ಮತ್ತೆ ವಾಪಸಾಗಲು ಶತ ಪ್ರಯತ್ನ ಮಾಡುತ್ತಿರುವಂತೆಯೇ ಇತ್ತ ಅವರ ಪ್ರಯತ್ನಕ್ಕೆ ಕೆಲ ಮಾಜಿ ಕ್ರಿಕೆಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಿಂದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಉಳಿದಿರುವ ಶ್ರೀಶಾಂತ್ ಮತ್ತೆ ವಾಪಸಾಗಲು ಶತ ಪ್ರಯತ್ನ ಮಾಡುತ್ತಿರುವಂತೆಯೇ ಇತ್ತ ಅವರ ಪ್ರಯತ್ನಕ್ಕೆ ಕೆಲ ಮಾಜಿ ಕ್ರಿಕೆಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶ್ರೀಶಾಂತ್ ಅಂತಾರಾಷ್ಟ್ರೀಯ ಕ್ರಿಕೆಟ್ ವಾಪಸಾಗುವ ಕುರಿತಂತೆ ಹೇಳಿಕೆ ನೀಡಿರುವ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಇದರಿಂದ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದಕ್ಕೆ ಅದೇ ಧಾಟಿಯಲ್ಲಿ ಶ್ರೀಶಾಂತ್ ತಿರುಗೇಟು ನೀಡಿದ್ದು, ನಾನು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಾಪಸಾದರೆ ಆಕಾಶ್ ಚೋಪ್ರಾಗೆ ಏನು ತೊಂದರೆ ಎಂದು ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ನಡೆದಿರುವ ಈ ಇಬ್ಬರು ಆಟಗಾರರ ವಾಕ್ಸಮರ ತಾರಕಕ್ಕೇರಿದ್ದು, ಆಕಾಶ್ ಚೋಪ್ರಾರನ್ನು ಶ್ರೀಶಾಂತ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ ಆಕಾಶ್ ಚೋಪ್ರಾಗೆ 2 ಮುಖವಾಡ ಧರಿಸಿದ್ದಾರೆ ಎಂದು ಟೀಕಿಸಿದ್ದಾರೆ.
ಇವರಿಬ್ಬರ ನಡುವಿನ ಟ್ವೀಟ್ ವಾಕ್ಸಮರ ಹೀಗಿತ್ತು.
I'm a bit of a hardliner when it comes to match-spot fixing...for expunging records and setting precedents. But that's my opinion.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


