ಕ್ರಿಕೆಟ್

ಏಕದಿನ ಮಾದರಿಯಲ್ಲಿ ಸಚಿನ್‌ಗಿಂತ ವಿರಾಟ್ ಕೊಹ್ಲಿ ಬೆಸ್ಟ್: ರಿಕಿ ಪಾಂಟಿಂಗ್

ಕ್ರಿಕೆಟ್ ಇತಿಹಾಸದಲ್ಲಿ ಡೊನಾಲ್ಡ್ ಬ್ರಾಡ್ಮನ್ ಬಿಟ್ಟರೆ, ಅವರ ನಂತರ ಸ್ಥಾನದಲ್ಲಿ ನಿಲ್ಲುವವರು ಟೀಂ ಇಂಡಿಯಾದ ಮಾಜಿ ನಾಯಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್...

ಏಕದಿನ ಮಾದರಿಯಲ್ಲಿ ಸಚಿನ್‌ಗಿಂತ ವಿರಾಟ್ ಕೊಹ್ಲಿ ಬೆಸ್ಟ್: ರಿಕಿ ಪಾಂಟಿಂಗ್
ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್
Published On :
ಕ್ರಿಕೆಟ್ ಇತಿಹಾಸದಲ್ಲಿ ಡೊನಾಲ್ಡ್ ಬ್ರಾಡ್ಮನ್ ಬಿಟ್ಟರೆ, ಅವರ ನಂತರ ಸ್ಥಾನದಲ್ಲಿ ನಿಲ್ಲುವವರು ಟೀಂ ಇಂಡಿಯಾದ ಮಾಜಿ ನಾಯಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್. ಆದರೆ ಏಕದಿನ ಪಂದ್ಯಗಳಲ್ಲಿ ಸಚಿನ್ ತೆಂಡೂಲ್ಕರ್ ಗಿಂತ ವಿರಾಟ್ ಕೊಹ್ಲಿ ಬೆಸ್ಟ್ ಬ್ಯಾಟ್ಸ್ ಮನ್ ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅಭಿಪ್ರಾಯಪಟ್ಟಿದ್ದಾರೆ. 
28 ವರ್ಷದ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ಪಾದಾರ್ಪಣೆ ಮಾಡಿದ ಕೆಲವೇ ವರ್ಷಗಳಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಎಲ್ಲಾ ಮಾದರಿಯಲ್ಲೂ ರನ್ ಹೊಳೆಯನ್ನೇ ಹರಿಸುತ್ತಿದ್ದಾರೆ. ಹೀಗಾಗಿ ಅವರೇ ವಿಶ್ವದ ಬೆಸ್ಟ್ ಬ್ಯಾಟ್ಸ್ ಮನ್ ಎಂದು ರಿಕಿ ಪಾಂಟಿಂಗ್ ಅಭಿಪ್ರಾಯಪಟ್ಟಿದ್ದಾರೆ. 
ಆಕ್ರಮಣಕಾರಿ ವ್ಯಕ್ತಿತ್ವದ ಕೊಹ್ಲಿ ವಿಶ್ವದ ಅತ್ಯುತ್ತಮ ಬ್ಯಾಟ್ಸ್ ಮನ್ ಎಂಬ ವಿಶ್ವಾಸ ನನಗೆ 6-7 ತಿಂಗಳ ಹಿಂದೆಯೇ ಮೂಡಿತ್ತು. ಆನಂತರದಲ್ಲಿ ಅವರ ಈ ಮಟ್ಟವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ದಿದ್ದಾರೆ ಎಂದು ಪಾಂಟಿಂಗ್ ಹೇಳಿದ್ದಾರೆ. 
ಏಕದಿನ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಅವರು 463 ಪಂದ್ಯಗಳಲ್ಲಿ 18, 426 ರನ್ ಸಿಡಿಸಿದ್ದಾರೆ. ಆದರೆ ಅವರ ಬ್ಯಾಟಿಂಗ್ ಸರಾಸರಿ 44.83 ಹೊಂದಿದ್ದಾರೆ. ವಿರಾಟ್ ಕೊಹ್ಲಿ 179 ಪಂದ್ಯಗಳ ಪೈಕಿ 7755 ರನ್ ಸಿಡಿಸಿದ್ದಾರೆ. ಅವರ ಬ್ಯಾಟಿಂಗ್ ಸರಾಸರಿ 53.11 ಹೊಂದಿದ್ದು ಸ್ಟ್ರೈಕ್ ರೇಟ್ 90 ಹೊಂದಿದ್ದಾರೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.