ಕ್ರಿಕೆಟ್

ಟೆಸ್ಟ್: ಬಾಂಗ್ಲಾ ವಿರುದ್ಧ ಕೊಹ್ಲಿ ಅಬ್ಬರದ ಶತಕ, ಬೃಹತ್ ಮೊತ್ತದತ್ತ ಟೀಂ ಇಂಡಿಯಾ

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ....

ಟೆಸ್ಟ್: ಬಾಂಗ್ಲಾ ವಿರುದ್ಧ ಕೊಹ್ಲಿ ಅಬ್ಬರದ ಶತಕ, ಬೃಹತ್ ಮೊತ್ತದತ್ತ ಟೀಂ ಇಂಡಿಯಾ
ವಿರಾಟ್ ಕೊಹ್ಲಿ
Published On :
ಹೈದರಾಬಾದ್: ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಅಬ್ಬರದ ಶತಕ ಸಿಡಿಸಿದ್ದು, ಭಾರತ ದಿನದಾಟದ ಅಂತ್ಯಕ್ಕೆ 356ಕ್ಕೆ ಮೂರು ವಿಕೆಟ್ ಕಳೆದುಕೊಂಡಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಟೀಂ ಇಂಡಿಯಾ ಕನ್ನಡಿಗ ಕೆ.ಎಲ್.ರಾಹುಲ್ (2) ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು. ಬಳಿಕ ಬಂದ ಚೇತೇಶ್ವರ ಪೂಜಾರ ಅವರು ಮುರಳಿ ವಿಜಯ್ ಜತೆಗೂಡಿ ಜವಾಬ್ದಾರಿಯುತ ಆಟ ಪ್ರದರ್ಶಿಸಿದರು. ಆದರೆ ಶತಕದ ಅಂಚಿನಲ್ಲಿ ಪೂಜಾರ ಕೆಟ್ಟ ಹೊಡೆತಕ್ಕೆ ಮುಂದಾಗಿ ಪೆವಿಲಿಯನ್ ಸೇರಿಕೊಂಡರು. 
ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ವಿರಾಟ್‌ ಕೊಹ್ಲಿ 12 ಬೌಂಡರಿಗಳ ಸಹಾಯದೊಂದಿಗೆ 111 ರನ್‌ ಗಳಿಸಿ ಎರಡನೇ ದಿನಕ್ಕೆ ಆಟವನ್ನು ಕಾಯ್ದಿರಿಸಿಕೊಂಡಿದ್ದಾರೆ. ಇದರೊಂದಿಗೆ ವೃತ್ತಿ ಜೀವನದ 43ನೇ ಶತಕ ಹಾಗೂ ಟೆಸ್ಟ್ ಕ್ರಿಕೆಟಿನಲ್ಲಿ 16ನೇ ಶತಕ ದಾಖಲಿಸಿದ್ದಾರೆ. ಇದರೊಂದಿಗೆ ಟೆಸ್ಟ್‌ ಕ್ರಿಕೆಟ್‌ ಅರ್ಹತೆ ಪಡೆದಿರುವ ಎಲ್ಲ 7 ತಂಡಗಳ ವಿರುದ್ಧ ಶತಕ ಬಾರಿಸಿರುವ ಸಾಧನೆ ಕೊಹ್ಲಿ ಅವರ ಮುಡಿಗೇರಿತು. ಅಲ್ಲದೆ ಭಾರತದ ಟೆಸ್ಟ್‌ ನಾಯಕರಲ್ಲಿ ಹೆಚ್ಚು ಶತಕ ಬಾರಿಸಿರುವವರ ಪಟ್ಟಿಯಲ್ಲಿ ಸೌರವ್ ಗಂಗೂಲಿ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದ್ದಾರೆ. 
ಸಂಕ್ಷಿಪ್ತ ಸ್ಕೋರ್
ಕೆ.ಎಲ್‌. ರಾಹುಲ್‌ – 2 (4), ಮುರುಳಿ ವಿಜಯ್‌ – 108(160), ಚೇತೇಶ್ವರ ಪೂಜಾರ – 83 (177), ಕೊಹ್ಲಿ – 111* (141), ರಹಾನೆ – 45* (60)

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.