ಬ್ರಾಡ್ಮನ್, ದ್ರಾವಿಡ್ ವಿಶ್ವದಾಖಲೆ ಮುರಿದ ವಿರಾಟ್ ಕೊಹ್ಲಿ
ಸತತ ನಾಲ್ಕು ಸರಣಿಗಳಲ್ಲಿ ದ್ವಿಶತಕ ಸಿಡಿಸುವ ಮೂಲಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್ ದಂತಕಥೆ ಡಾನ್ ಬ್ರಾಡ್ಮನ್ ಮತ್ತು ರಾಹುಲ್ ದ್ರಾವಿಡ್...

Published On :
ಹೈದರಾಬಾದ್: ಸತತ ನಾಲ್ಕು ಸರಣಿಗಳಲ್ಲಿ ದ್ವಿಶತಕ ಸಿಡಿಸುವ ಮೂಲಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್ ದಂತಕತೆ ಡಾನ್ ಬ್ರಾಡ್ಮನ್ ಮತ್ತು ರಾಹುಲ್ ದ್ರಾವಿಡ್ ಅವರ ವಿಶ್ವದಾಖಲೆಯನ್ನು ಮುರಿದಿದ್ದಾರೆ.
ಹೈದರಾಬಾದ್ ನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ 204 ರನ್ ಸಿಡಿಸಿದರು. ಇದು ಅವರ ನಾಲ್ಕನೇ ದ್ವಿಶತಕವಾಗಿದ್ದು ಸತತ ನಾಲ್ಕನೇ ಸರಣಿಯಲ್ಲಿ ದ್ವಿಶತಕ ಸಿಡಿಸಿದ ವಿಶ್ವದ ಏಕೈಕ ಬ್ಯಾಟ್ಸ್ ಮನ್ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.
ಇನ್ನು ಡಾನ್ ಬ್ರಾಡ್ಮನ್ ಹಾಗೂ ರಾಹುಲ್ ದ್ರಾವಿಡ್ ಕ್ರಮವಾಗಿ ಸತತ 3 ಸರಣಿಗಳಲ್ಲಿ ದ್ವಿಶತಕ ಸಾಧನೆಗೈದಿದ್ದರು. ಕೊಹ್ಲಿಯ ಈ ನಾಲ್ಕು ದ್ವಿಶತಕ ಸಾಧನೆ ಕೇವಲ 7 ತಿಂಗಳ ಅವಧಿಯಲ್ಲಿ ದಾಖಲಾಗಿದೆ. ಈ ಹಿಂದೆ ವೆಸ್ಟ್ ಇಂಡೀಸ್, ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧ ದ್ವಿಶತಕ ಬಾರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Virat Kohliವಿರಾಟ್ ಕೊಹ್ಲಿRecordವಿಶ್ವದಾಖಲೆRahul Dravidರಾಹುಲ್ ದ್ರಾವಿಡ್Don Bradmanಡಾನ್ ಬ್ರಾಡ್ಮನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


