ಕ್ರಿಕೆಟ್

ಭಾರತ-ಬಾಂಗ್ಲಾ ಏಕೈಕ ಟೆಸ್ಟ್: ಬಾಂಗ್ಲಾದೇಶಕ್ಕೆ 459 ರನ್ ಗಳ ಗುರಿ

ಬಾಂಗ್ಲಾದೇಶ ವಿರುದ್ಧ ಏಕೈಕ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 159 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿದೆ...

ಭಾರತ-ಬಾಂಗ್ಲಾ ಏಕೈಕ ಟೆಸ್ಟ್: ಬಾಂಗ್ಲಾದೇಶಕ್ಕೆ 459 ರನ್ ಗಳ ಗುರಿ
ಬಾಂಗ್ಲಾದೇಶ
Published On :
ಹೈದರಾಬಾದ್: ಬಾಂಗ್ಲಾದೇಶ ವಿರುದ್ಧ ಏಕೈಕ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 159 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿದೆ. ಇದರೊಂದಿಗೆ ಬಾಂಗ್ಲಾದೇಶಕ್ಕೆ ಗೆಲ್ಲಲು 459 ರನ್ ಗಳ ಗುರಿ ನೀಡಿದೆ. 
ಹೈದರಾಬಾದ್ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 687 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ 388 ರನ್ ಗಳಿಗೆ ಸರ್ವಪತನ ಕಂಡಿತು. 
ನಾಲ್ಕನೇ ದಿನವಾದ ಇಂದು ದ್ವಿತೀಯ ಇನ್ನಿಂಗ್ಸ್ ಪ್ರಾರಂಭಿಸಿದ ಟೀಂ ಇಂಡಿಯಾ ನಾಲ್ಕು ವಿಕೆಟ್ ನಷ್ಟಕ್ಕೆ 159 ಸಿಡಿಸಿತು. ನಂತರ ನಾಯಕ ವಿರಾಟ್ ಕೊಹ್ಲಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡರು. ಇದರೊಂದಿಗೆ ಬಾಂಗ್ಲಾದೇಶ ಗೆಲ್ಲಲು 459 ರನ್ ಗಳ ಬೃಹತ್ ಗುರಿ ಪಡೆದಿದೆ. ಈ ಪಂದ್ಯವನ್ನು ಭಾರತ ಕೈವಶ ಮಾಡಿಕೊಳ್ಳಬೇಕಾದರೆ ಬಾಂಗ್ಲಾದೇಶವನ್ನು ಆಲೌಟ್ ಮಾಡಬೇಕಿದೆ. 
ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ 687/6 ಡಿಕ್ಲೇರ್ 
ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್ 388ಕ್ಕೆ ಆಲೌಟ್ 
ಟೀಂ ಇಂಡಿಯಾ ದ್ವಿತೀಯ ಇನ್ನಿಂಗ್ಸ್ 159ಕ್ಕೆ ಡಿಕ್ಲೇರ್ 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.