ಕ್ರಿಕೆಟ್

ಸಚಿನ್‌ರ ಮತ್ತೊಂದು ದಾಖಲೆ ಮುರಿಯುವತ್ತ ಕೊಹ್ಲಿ

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಸದ್ಯ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದು ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ದಾಖಲೆಯನ್ನು ಮುರಿಯುವ ಸಾಧ್ಯತೆಯಿದೆ...

ಸಚಿನ್‌ರ ಮತ್ತೊಂದು ದಾಖಲೆ ಮುರಿಯುವತ್ತ ಕೊಹ್ಲಿ
ಸಚಿನ್ ತೆಂಡೂಲ್ಕರ್-ವಿರಾಟ್ ಕೊಹ್ಲಿ
Published On :
ನವದೆಹಲಿ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಸದ್ಯ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದು ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ದಾಖಲೆಯನ್ನು ಮುರಿಯುವ ಸಾಧ್ಯತೆಯಿದೆ. 
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಸಾರ್ವಕಾಲಿಕ ಶ್ರೇಷ್ಠ ಟೆಸ್ಟ್ ಶ್ರೇಯಾಂಕದಲ್ಲಿ ಸಚಿನ್ ತೆಂಡೂಲ್ಕರ್ 898 ಅಂಕ ಸಂಪಾದಿಸಿ 31ನೇ ಸ್ಥಾನದಲ್ಲಿದ್ದಾರೆ. 895 ಅಂಕ ಸಂಪಾದಿಸಿರುವ ವಿರಾಟ್ 33ನೇ ಸ್ಥಾನದಲ್ಲಿದ್ದು, ಭರ್ಜರಿ ಫಾರ್ಮ್ ನಲ್ಲಿರುವ ಅವರು ಮುಂದಿನ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತಮ್ಮ ಜಾದೂವನ್ನು ಮುಂದುವರಿಸಿದರೆ ಸಚಿನ್ ಗಿಂತ ಮೇಲಿನ ಶ್ರೇಯಾಂಕ ಪಡೆಯುವ ಅವಕಾಶವಿದೆ. 
ಕಳೆದ 9 ಟೆಸ್ಟ್ ಪಂದ್ಯಗಳಲ್ಲಿ 1206 ರನ್ ಸಿಡಿಸಿರುವ ವಿರಾಟ್ ಕೊಹ್ಲಿ ಟೆಸ್ಟ್ ನಲ್ಲಿ ಅದ್ಭುತವಾಗಿ ಆಡುತ್ತಿದ್ದಾರೆ. ಐಸಿಸಿ ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಕೊಹ್ಲಿಗಿಂತ 38 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದು ಮುಂದಿನ ಸರಣಿಯಲ್ಲಿ ಯಾರು ಅದ್ಭುತವಾಗಿ ಆಡುತ್ತಾರೆ ಅವರು ಅಗ್ರಸ್ಥಾನಕ್ಕೇರಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.