ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಏಕದಿನ ತಂಡದಲ್ಲಿ ಆಡುವ ವಿಶ್ವಾಸವಿದೆ: ನೆಹ್ರಾ
ಟೀಂ ಇಂಡಿಯಾ ಟಿ20 ತಂಡದ ಎಡಗೈ ವೇಗಿ ಆಶಿಶ್ ನೆಹ್ರಾ ಜೂನ್ ನಲ್ಲಿ ನಡೆಯುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ವೇಳೆಗೆ ಏಕದಿನ ತಂಡಕ್ಕೆ ಮರಳುವ..

Published On :
ನವದೆಹಲಿ: ಟೀಂ ಇಂಡಿಯಾ ಟಿ20 ತಂಡದ ಎಡಗೈ ವೇಗಿ ಆಶಿಶ್ ನೆಹ್ರಾ ಜೂನ್ ನಲ್ಲಿ ನಡೆಯುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ವೇಳೆಗೆ ಏಕದಿನ ತಂಡಕ್ಕೆ ಮರಳುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಆಶಿಶ್ ನೆಹ್ರಾ 2011ರಲ್ಲಿ ಕೊನೆಯ ಬಾರಿಗೆ ಟೀಂ ಇಂಡಿಯಾ ಪರ ಏಕದಿನ ಪಂದ್ಯವನ್ನು ಆಡಿದ್ದರು. ಬಳಿಕ ಟೀಂ ಇಂಡಿಯಾ ಏಕದಿನ ತಂಡದಲ್ಲಿ ಸ್ಥಾನ ಸಂಪಾದಿಸಲು ಸಾಧ್ಯವಾಗಿರಲಿಲ್ಲ. ಇದೀಗ ಇಂಗ್ಲೆಂಡ್ ನಲ್ಲಿ ಟ್ರೋಫಿ ನಡೆಯುತ್ತಿದ್ದು ಅಲ್ಲಿನ ವಾತಾವರಣಕ್ಕೆ ತಾವು ಹೊಂದಿಕೆಯಾಗಲಿದ್ದು ನಾಲ್ವರು ವೇಗಿಗಳ ಪೈಕಿ ತಾನು ಸ್ಥಾನ ಪಡೆಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆಶಿಶ್ ನೆಹ್ರಾ ವಿಜಯ್ ಹಜಾರೆ ಟ್ರೋಫಿ ಮೂಲಕ ಟೀಂ ಇಂಡಿಯಾ ಏಕದಿನ ತಂಡಕ್ಕೆ ಹಿಂದಿರುಗುವ ಯೋಜನೆಯನ್ನು ಹಾಕಿಕೊಂಡಿದ್ದಾರೆ. ಇಎಸ್‌ಪಿಎನ್ ಪ್ರಕಾರ ಫೆಬ್ರವರಿ ಅಂತ್ಯಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಆಶಿಶ್ ನೆಹ್ರಾ ಪಾದಾರ್ಪಣೆ ಮಾಡಿ 18 ವರ್ಷ ಪೂರೈಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


