ನಾಯಕತ್ವ ಸ್ಥಾನದಿಂದ ಧೋನಿ ಕೈ ಬಿಟ್ಟ ಪುಣೆ!
ಐಪಿಎಲ್-2017ಗೆ ದಿನಗಣನೆ ಆರಂಭವಾಗಿರುವಂತೆಯೇ ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ಪುಣೆ ತಂಡ ಶಾಕ್ ನೀಡಿದ್ದು, ತಂಡದ ನಾಯಕತ್ವದಿಂದ ಅವರನ್ನು ಕೈಬಿಟ್ಟಿದೆ.

ನವದೆಹಲಿ: ಐಪಿಎಲ್-2017ಗೆ ದಿನಗಣನೆ ಆರಂಭವಾಗಿರುವಂತೆಯೇ ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ಪುಣೆ ತಂಡ ಶಾಕ್ ನೀಡಿದ್ದು, ತಂಡದ ನಾಯಕತ್ವದಿಂದ ಅವರನ್ನು ಕೈಬಿಟ್ಟಿದೆ.
2016ನೇ ಸಾಲಿನ ಐಪಿಎಲ್ ನಲ್ಲಿ ಪುಣೆ ತಂಡ ತೋರಿದ ಕಳಪೆ ಪ್ರದರ್ಶನದಿಂದಾಗಿ ತಂಡದ ಮಾಲೀಕರು ನಾಯಕ ಧೋನಿ ವಿರುದ್ಧ ಕೆಂಗಣ್ಣು ಬೀರಿದ್ದು, ಅವರನ್ನು ನಾಯಕತ್ವದಿಂದ ಕೈಬಿಟ್ಟಿದ್ದಾರೆ. ಅಲ್ಲದೆ ಅವರ ಸ್ಥಾನಕ್ಕೆ ಆಸಿಸ್ ತಂಡದ ನಾಯಕ ಸ್ಟೀವ್ ಸ್ಮಿತ್ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಿದೆ.
2017ನೇ ಸಾಲಿನ ಐಪಿಎಲ್ ಹರಾಜು ಪ್ರಕ್ರಿಯೆಗೆ ಕೇವಲ ಎರಡೇ ದಿನ ಬಾಕಿ ಇದ್ದು ಈ ಹಂತದಲ್ಲಿ ಪುಣೆ ಮಾಲೀಕರ ನಡೆ ತೀವ್ರ ಕುತೂಹಲ ಕೆರಳಿಸಿದೆ. ಇನ್ನು ಈ ಬಗ್ಗೆ ಪುಣೆ ತಂಡದ ಮೂಲಗಳು ತಿಳಿಸಿರುವಂತೆ ನಾಯಕತ್ವ ಬದಲಾವಣೆ ಕುರಿತಂತೆ ಮಾಲೀಕರು ಧೋನಿ ಅವರೊಂದಿಗೂ ಚರ್ಚೆ ನಡೆಸಿದ್ದು, ಇದಕ್ಕೆ ಧೋನಿ ಕೂಡ ಸಹಮತ ವ್ಯಕ್ತಪಡಿಸಿದ್ದಾರಂತೆ. ಅಲ್ಲದೆ ಓರ್ವ ಆಟಗಾರನಾಗಿ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಐಪಿಎಲ್ ಸರಣಿಯಲ್ಲಿ ಧೋನಿ ನಾಯಕತ್ವದ ಪುಣೆ ತಂಡ ಒಟ್ಟು 14 ಪಂದ್ಯಗಳನ್ನು ಆಡಿದ್ದು, ಈ ಪೈಕಿ 5 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಸರಣಿಯಲ್ಲಿ ಒಟ್ಟು 12 ಇನ್ನಿಂಗ್ಸ್ ಗಳನ್ನು ಆಡಿದ್ದ ಧೋನಿ 284 ರನ್ ಗಳಿಸಿದ್ದರು. ಇದರಲ್ಲಿ ಒಂದು ಅರ್ಧಶತಕ ಕೂಡ ಸೇರಿದೆ.
ಈ ಹಿಂದೆ ಚೆನ್ನೈ ತಂಡದ ನಾಯಕರಾಗಿದ್ದ ಧೋನಿ 9 ಸರಣಿಗಳಲ್ಲಿ ತಂಡವನ್ನು ಮುನ್ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


