13 ವರ್ಷಗಳ ಬಳಿಕ ಗಂಗೂಲಿ ದಾಖಲೆ ಮುರಿದ ಎಬಿಡಿವಿಲಿಯರ್ಸ್!
ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸಮನ್ ಎಬಿ ಡಿವಿಲಿಯರ್ಸ್ ಮತ್ತೊಂದು ದಾಖಲೆ ನಿರ್ಮಿಸಿದ್ದು, ಏಕದಿನ ಕ್ರಿಕೆಟ್ ನಲ್ಲಿ ಅತಿ ವೇಗದ 9 ಸಾವಿರ ರನ್ ಪೂರೈಸಿದ ದಾಖಲೆ ನಿರ್ಮಿಸಿದ್ದಾರೆ.

ನವದೆಹಲಿ: ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸಮನ್ ಎಬಿ ಡಿವಿಲಿಯರ್ಸ್ ಮತ್ತೊಂದು ದಾಖಲೆ ನಿರ್ಮಿಸಿದ್ದು, ಏಕದಿನ ಕ್ರಿಕೆಟ್ ನಲ್ಲಿ ಅತಿ ವೇಗದ 9 ಸಾವಿರ ರನ್ ಪೂರೈಸಿದ ದಾಖಲೆ ನಿರ್ಮಿಸಿದ್ದಾರೆ.
ಹ್ಯಾಮಿಲ್ಟನ್ ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಎಬಿಡಿ ಈ ಸಾಧನೆ ಮಾಡಿದ್ದು, ಎಬಿಡಿ 37 ರನ್ ಗಳಿಸುತ್ತಿದ್ದಂತೆಯೇ ಸೌರವ್ ಗಂಗೂಲಿ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಈ ಹಿಂದೆ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ 228 ಇನ್ನಿಂಗ್ಸ್ ಗಳಲ್ಲಿ 98 ಸಾವಿರ ರನ್ ಪೂರೈಸಿದ್ದರೆ ಎಬಿಡಿ ಕೇವಲ 205 ಇನ್ನಿಂಗ್ಸ್ ಗಳಲ್ಲಿ 9 ಸಾವಿರ ರನ್ ಪೂರೈಸಿದ್ದರು. ಆ ಮೂಲಕ 13 ವರ್ಷಗಳ ಬಳಿಕ ಸೌರವ್ ಗಂಗೂಲಿ ದಾಖಲೆಯನ್ನು ಎಬಿಡಿ ಮುರಿದಿದ್ದಾರೆ. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 9 ಸಾವಿರ ರನ್ ಪೂರೈಕೆಗಾಗಿ 235 ಇನ್ನಿಂಗ್ಸ್ ತೆಗೆದುಕೊಂಡಿದ್ದರು.
ಕೇವಲ ಇನ್ನಿಂಗ್ಸ್ ಮಾತ್ರವಷ್ಟೇ ಅಲ್ಲದೇ ಎಸೆತಗಳಲ್ಲೂ ಎಬಿಡಿ ದಾಖಲೆ ನಿರ್ಮಿಸಿದ್ದು, 9000 ಸಾವಿರ ರನ್ ಪೂರೈಕೆಗಾಗಿ ಎಬಿಡಿ ಎದುರಿಸಿದ್ದು ಕೇವಲ 9005 ಎಸೆತಗಳಷ್ಟೇ ಅಂತೆ. ಈ ಹಿಂದೆ ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸಮನ್ ವಿಕೆಟ್ ಕೀಪರ್ ಅ್ಯಡಂ ಗಿಲ್ ಕ್ರಿಸ್ಟ್ 9 ಸಾವಿರ ರನ್ ಪೂರೈಕೆಗಾಗಿ 9328 ಎಸೆತಗಳನ್ನು ಎದುರಿಸಿದ್ದರು.
ಅತ್ಯಂತ ಕಡಿಮೆ ಇನ್ನಿಂಗ್ಸ್ ನಲ್ಲಿ 9 ಸಾವಿರ ರನ್ ಪೂರೈಸಿದ ಮೊದಲ ದಕ್ಷಿಣ ಆಫ್ರಿಕಾ ಆಟಗಾರ
ಇದೇ ವೇಳೆ ಎಬಿಡಿ 9 ಸಾವಿರ ರನ್ ಪೂರೈಸಿದ 2ನೇ ಮತ್ತು ಕಡಿಮೆ ಇನ್ನಿಂಗ್ಸ್ ನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಕೀರ್ತಿಗೂ ಭಾಜನರಾಗಿದ್ದಾರೆ. ಈ ಹಿಂದೆ ಆಫ್ರಿಕಾದ ಜಾಕಸ್ ಕಾಲಿಸ್ 242 ಇನ್ನಿಂಗ್ಸ್ ಗಳಲ್ಲಿ 9 ಸಾವಿರ ರನ್ ಪೂರೈಸಿದ್ದರು. ಇನ್ನು ಎಬಿಡಿ ಅವರ ಈ 9 ಸಾವಿರ ರನ್ ಗಳಲ್ಲಿ 24 ಶತಕಗಳು ದಾಖಲಾಗಿದ್ದು, ಸಚಿನ್ 9 ಸಾವಿರ ರನ್ ಪೂರೈಸುವ ವೇಳೆ 25 ಶತಕಗಳನ್ನು ಸಿಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


