ಪುಣೆ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಹೀನಾಯ ಸೋಲು
ಪುಣೆಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 333 ರನ್ ಗಳ ಹೀನಾಯ ಸೋಲು ಕಂಡಿದೆ.

ಪುಣೆ: ಪುಣೆಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 333 ರನ್ ಗಳ ಹೀನಾಯ ಸೋಲು ಕಂಡಿದೆ.
ಆಸ್ಟ್ರೇಲಿಯಾ ನೀಡಿದ್ದ 441 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಕೊಹ್ಲಿ ಕೇವಲ 107 ರನ್ ಗಳಿಗೆ ಸರ್ವಪತನ ಕಾಣುವ ಮೂಲಕ ಸ್ಮಿತ್ ಪಡೆ ವಿರುದ್ಧ ಬರೊಬ್ಬರಿ 333 ರನ್ ಗಳ ಹೀನಾಯ ಸೋಲು ಕಂಡಿದೆ. 441 ರನ್ ಗಳ ಗುರಿಯನ್ನು ಬೆನ್ನುಹತ್ತಿದೆ ಭಾರತ ತಂಡ ಮೊದಲ ಇನ್ನಿಂಗ್ಸ್ ರೀತಿಯಲ್ಲೇ ಎರಡನೇ ಇನ್ನಿಂಗ್ಸ್ ನಲ್ಲೂ ಕಳಪೆ ಬ್ಯಾಟಿಂಗ್ ಮುಂದುವರೆಸಿತು. ಪೂಜಾರ ಗಳಿಸಿದ 31 ರನ್ ಗಳೇ ಭಾರತದ ಪರ ಬ್ಯಾಟ್ಸಮನ್ ಗಳಿಸಿದ ವೈಯುಕ್ತಿಕ ಗರಿಷ್ಠ ರನ್ ಗಳಿಕೆಯಾಗಿತ್ತು ಎನ್ನುವುದು ತಂಡದ ಬ್ಯಾಟಿಂಗ್ ವೈಫಲ್ಯಕ್ಕೆ ಕನ್ನಡಿ ಹಿಡಿದಂತಿದೆ.
ಇನ್ನು ಮೊದಲ ಇನ್ನಿಂಗ್ಸ್ ನಂತೆಯೇ ಎರಡನೇ ಇನ್ನಿಂಗ್ಸ್ ನಲ್ಲೂ ಭಾರತೀಯ ಬ್ಯಾಟ್ಸಮನ್ ಗಳ ಮೇಲೆ ಸವಾರಿ ಮಾಡಿದ ಒಕೀಫ್ 6 ವಿಕೆಟ್ ಪಡೆದು ಮಂಚಿದರು. ಅಂತೆಯೇ ಲೈಅನ್ ಕೂಡ ನಾಲ್ಕು ವಿಕೆಟ್ ಪಡೆದು ಭಾರತದ ಸೋಲಿಗೆ ಕಾರಣರಾದರು.
ಇನ್ನು ಎರಡೂ ಇನ್ನಿಂಗ್ಸ್ ನಿಂದ ಒಟ್ಟು 12 ವಿಕೆಟ್ ಪಡೆದ ಒಕೀಫ್ ಅರ್ಹವಾಗಿಯೇ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನಾರದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


