ಪುಣೆ ಪಿಚ್ ಅತ್ಯಂತ ಕಳಪೆ: ಐಸಿಸಿ
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಹೀನಾಯ ಸೋಲು...

Published On :
ನವದೆಹಲಿ: ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಅನುಭವಿಸಿದ್ದು ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಪುಣೆ ಪಿಚ್ ಅತ್ಯಂತ ಕಳಪೆ ಎಂದು ಹೇಳಿದೆ.
ಕುರಿತಂತೆ ಪರಿಶೀಲನೆ ನಡೆಸಿದ ಐಸಿಸಿ ರೆಫ್ರಿ ಕ್ರಿಸ್ ಬ್ರಾಡ್ ಪುಣೆ ಪಿಚ್ ಸಂಪೂರ್ಣ ಕಳಪೆಯಿಂದ ಕೂಡಿದೆ ಎಂದು ವರದಿ ಮಾಡಿದ್ದು ಈ ಸಂಬಂಧ 14 ದಿನಗಳೊಳಗೆ ಉತ್ತರ ನೀಡುವಂತೆ ಬಿಸಿಸಿಐಗೆ ಐಸಿಸಿ ನೋಟಿಸ್ ನೀಡಿದೆ.
ಇನ್ನು 2015ರಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ನಾಗ್ಪುರ ಟೆಸ್ಟ್ ಪಿಚ್ ಕೂಡ ಕಳಪೆ ಎಂದು ಈ ಹಿಂದೆ ಐಸಿಸಿ ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


