ಕ್ರಿಕೆಟ್

ಬಿಸಿಸಿಐ ಅಧ್ಯಕ್ಷ ಹುದ್ದೆಗೆ ಸೌರವ್ ಗಂಗೂಲಿ ಸೂಕ್ತ ವ್ಯಕ್ತಿ: ಸುನಿಲ್ ಗವಾಸ್ಕರ್

ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಬಿಸಿಸಿಐ ಅಧ್ಯಕ್ಷ ಹುದ್ದೆಗೆ ಸೌರವ್ ಗಂಗೂಲಿ ಸೂಕ್ತ ವ್ಯಕ್ತಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಸಿಸಿಐ ಅಧ್ಯಕ್ಷ ಹುದ್ದೆಗೆ ಸೌರವ್ ಗಂಗೂಲಿ ಸೂಕ್ತ ವ್ಯಕ್ತಿ: ಸುನಿಲ್ ಗವಾಸ್ಕರ್
ಸುನಿಲ್ ಗವಾಸ್ಕರ್- ಸೌರವ್ ಗಂಗೂಲಿ (ಸಂಗ್ರಹ ಚಿತ್ರ)
Published On :
ಅನುರಾಗ್ ಠಾಕೂರ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು, ಮುಂದಿನ ಅಧ್ಯಕ್ಷರ ಆಯ್ಕೆಯ ಬಗ್ಗೆ ಚರ್ಚೆ ಪ್ರಾರಂಭವಾಗಿದೆ. ಈ ನಡುವೆ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಬಿಸಿಸಿಐ ಅಧ್ಯಕ್ಷ ಹುದ್ದೆಗೆ ಸೌರವ್ ಗಂಗೂಲಿ ಸೂಕ್ತ ವ್ಯಕ್ತಿ ಎಂದು ಅಭಿಪ್ರಾಯಪಟ್ಟಿದ್ದಾರೆ. 
ಬಿಸಿಸಿಐ ಅಧ್ಯಕ್ಷ ಸ್ಥಾನದ ಹುದ್ದೆಯ ಜವಾಬ್ದಾರಿ ವಹಿಸಿಕೊಳ್ಳಲು ಸೌರವ್ ಗಂಗೂಲಿ ಅರ್ಹ, ಸೂಕ್ತ ಅಭ್ಯರ್ಥಿ ಎಂದು ಸುನಿಲ್ ಗವಾಸ್ಕರ್ ಖಾಸಗಿ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದಾರೆ. ಸಂಕಷ್ಟದ ಪರಿಸ್ಥಿತಿಯಲ್ಲಿ ದಾದಾ ಭಾರತೀಯ ತಂಡವನ್ನು ಮುನ್ನಡೆಸಿದ್ದು ಮಾದರಿ ಎಂದಿರುವ ಸುನಿಲ್ ಗವಾಸ್ಕರ್, 1999-2000 ಅವಧಿಯಲ್ಲಿ ಭಾರತೀಯ ಕ್ರಿಕೆಟ್ ತಂಡ ಮ್ಯಾಚ್ ಫಿಕ್ಸಿಂಗ್ ಗೆ ತುತ್ತಾಗಿತ್ತು. ಅದೇ ವೇಳೆಯಲ್ಲಿ ಭಾರತೀಯ ಕ್ರಿಕೆಟ್ ತಂಡದ ಜವಾಬ್ದಾರಿ ದಾದಾ ಹೆಗಲೇರಿತ್ತು. ದಾದಾ ಅದನ್ನು ಸಮರ್ಥವಾಗಿ ನಿರ್ವಹಿಸಿದ್ದರು ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ. 
ಬಿಸಿಸಿಐ ನ ಉನ್ನತಾಧಿಕಾರಿಗಳನ್ನು ನೇಮಕ ಮಾಡುವ ಸಂಬಂಧ ಜ.19 ರಂದು ನಿರ್ಧಾರ ಬಹಿರಂಗವಾಗುವ ಸಾಧ್ಯತೆ ಇದ್ದು, ನ್ಯಾ.ಆರ್ ಎಂ ಲೋಧಾ ನೇಮಕಾತಿಯ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.