ಕ್ರಿಕೆಟ್

ಕ್ರಿಕೆಟ್ ವೃತ್ತಿಗೆ ಧೋನಿ ವಿದಾಯ ಹೇಳಿದ್ರೆ ಅವರ ಮನೆ ಮುಂದೆ ಧರಣಿ ಮಾಡುತ್ತಿದ್ದೆ: ಗವಾಸ್ಕರ್

ಟೀಂ ಇಂಡಿಯಾ ಸೀಮಿತ ಓವರ್ ಗಳ ನಾಯಕ ಎಂಎಸ್ ಧೋನಿ ನಾಯಕತ್ವಕ್ಕೆ ವಿದಾಯ ಹೇಳಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತದ ಮಾಜಿ ನಾಯಕ...

ಕ್ರಿಕೆಟ್ ವೃತ್ತಿಗೆ ಧೋನಿ ವಿದಾಯ ಹೇಳಿದ್ರೆ ಅವರ ಮನೆ ಮುಂದೆ ಧರಣಿ ಮಾಡುತ್ತಿದ್ದೆ: ಗವಾಸ್ಕರ್
ಸುನೀಲ್ ಗವಾಸ್ಕರ್-ಎಂಎಸ್ ಧೋನಿ
Published On :

ನವದೆಹಲಿ: ಟೀಂ ಇಂಡಿಯಾ ಸೀಮಿತ ಓವರ್ ಗಳ ನಾಯಕ ಎಂಎಸ್ ಧೋನಿ ನಾಯಕತ್ವಕ್ಕೆ ವಿದಾಯ ಹೇಳಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತದ ಮಾಜಿ ನಾಯಕ ಸುನಿಲ್ ಗವಾಸ್ಕರ್, ಧೋನಿ ಕ್ರಿಕೆಟ್ ಗೆ ವಿದಾಯ ಹೇಳಿದ್ದರೆ ಅವರ ಮನೆ ಮುಂದೆ ಧರಣಿ ಮಾಡುತ್ತಿದ್ದೆ ಎಂದು ಹೇಳಿದ್ದಾರೆ.

ಧೋನಿ ಪ್ರತಿಭಾನ್ವಿತ ಆಟಗಾರನಾಗಿದ್ದು ಅವರಲ್ಲಿ ಇನ್ನೂ ಸಾಕಷ್ಟು ಉತ್ತಮ ಆಟ ಉಳಿದಿದೆ. ಈಗಲೂ ಅವರು ಯಾವುದೇ ಹಂತದಲ್ಲಿ ಪಂದ್ಯದ ಗತಿಯನ್ನು ಬದಲಾಯಿಸುವ ಶಕ್ತಿ ಹೊಂದಿದ್ದಾರೆ ಎಂದು ಹೇಳಿದರು.

ಟೀಂ ಇಂಡಿಯಾಗೆ ಧೋನಿಯ ಅಗತ್ಯ ಇದೆ. ಇನ್ನಷ್ಟು ವರ್ಷಗಳ ಕಾಲ ಅವರು ತಂಡದಲ್ಲಿ ನಿಶ್ಚಿಂತೆಯಿಂದ ಆಡಬಹುದು. ಇದೀಗ ನಾಯಕತ್ವದ ಜವಾಬ್ದಾರಿ ಕಡಿಮೆಯಾಗಿರುವುದರಿಂದ ಯಾವುದೇ ತೊಂದರೆಯಿಲ್ಲದೆ ವಿಕೆಟ್ ಕೀಪಿಂಗ್ ಮತ್ತು ಬ್ಯಾಟಿಂಗ್ ಮಾಡಬಹುದು ಎಂದು ಸುನೀಲ್ ಗವಾಸ್ಕರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.