ಕ್ರಿಕೆಟ್

ಕೊನೆಯ ಬಾರಿಗೆ ಟೀಂ ಇಂಡಿಯಾದ ನಾಯಕನಾಗಿ ಕಣಕ್ಕಿಳಿಯಲಿರುವ ಎಂಎಸ್ ಧೋನಿ

ಟೀಂ ಇಂಡಿಯಾ ಸೀಮಿತ ಓವರ್ ತಂಡದ ನಾಯಕತ್ವ ಸ್ಥಾನಕ್ಕೆ ಇತ್ತೀಚೆಗಷ್ಟೇ ನಿವೃತ್ತಿ ಘೋಷಿಸಿದ್ದ ಮಹೇಂದ್ರ ಸಿಂಗ್ ಧೋನಿ ಇದೀಗ ಕೊನೆಯ ಬಾರಿಗೆ ಟೀಂ ಇಂಡಿಯಾದ...

ಕೊನೆಯ ಬಾರಿಗೆ ಟೀಂ ಇಂಡಿಯಾದ ನಾಯಕನಾಗಿ ಕಣಕ್ಕಿಳಿಯಲಿರುವ ಎಂಎಸ್ ಧೋನಿ
ಎಂಎಸ್ ಧೋನಿ
Published On :
ಟೀಂ ಇಂಡಿಯಾ ಸೀಮಿತ ಓವರ್ ತಂಡದ ನಾಯಕತ್ವ ಸ್ಥಾನಕ್ಕೆ ಇತ್ತೀಚೆಗಷ್ಟೇ ನಿವೃತ್ತಿ ಘೋಷಿಸಿದ್ದ ಮಹೇಂದ್ರ ಸಿಂಗ್ ಧೋನಿ ಇದೀಗ ಕೊನೆಯ ಬಾರಿಗೆ ಟೀಂ ಇಂಡಿಯಾದ ನಾಯಕನ ಸ್ಥಾನವನ್ನು ಅಲಂಕರಿಸಲಿದ್ದಾರೆ. 
ಅದು ಹೇಗೆ ಅಂತೀರಾ...ಏಕದಿನ ಮತ್ತು ಟಿ20 ಸರಣಿಗಾಗಿ ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಅಭ್ಯಾಸ ಪಂದ್ಯದಲ್ಲಿ ಭಾಗವಹಿಸುವ ಎ ತಂಡಕ್ಕೆ ನಾಯಕನನ್ನಾಗಿ ಧೋನಿಯನ್ನು ಆಯ್ಕೆ ಸಮಿತಿ ಆಯ್ಕೆ ಮಾಡಿದೆ. ಇದರೊಂದಿಗೆ ಕೊನೆಯ ಬಾರಿಗೆ ಟೀಂ ಇಂಡಿಯಾ ನಾಯಕ ಸ್ಥಾನವನ್ನು ಧೋನಿ ನಿರ್ವಹಿಸಲಿದ್ದಾರೆ. 
ಭಾರತ ಎ ತಂಡ ಇಂಗ್ಲೆಂಡ್ ವಿರುದ್ಧ ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದ್ದು ಆ ಪೈಕಿ ಒಂದು ಪಂದ್ಯದಲ್ಲಿ ಧೋನಿ ಮತ್ತು ಇನ್ನೊಂದು ಪಂದ್ಯದಲ್ಲಿ ಅಜಿಂಕ್ಯ ರಹಾನೆ ನಾಯಕನ ಪಾತ್ರ ನಿರ್ವಹಿಸಲಿದ್ದಾರೆ. 
ಜನವರಿ 10 ರಂದು ಮುಂಬೈನ ಬ್ರಾಬೌರ್ನೆ ಕ್ರೀಡಾಂಗಣದಲ್ಲಿ ಮೊದಲ ಅಭ್ಯಾಸ ಪಂದ್ಯ ನಡೆಯಲಿದ್ದು ಇದರ ಸಾರಥ್ಯ ಧೋನಿ ವಹಿಸಲಿದ್ದಾರೆ. ಇನ್ನೊಂದು ಪಂದ್ಯ 12 ರಂದು ನಡೆಯಲಿದ್ದು ಈ ಪಂದ್ಯಕ್ಕೆ ಅಜಿಂಕ್ಯ ರಹಾನೆ ನಾಯಕನಾಗಲಿದ್ದಾರೆ. 
ಜನವರಿ 15ರಿಂದ ಏಕದಿನ ಸರಣಿ ಆರಂಭವಾಗಲಿದ್ದು ಮೊದಲ ಏಕದಿನ ಪಂದ್ಯ ಪುಣೆಯಲ್ಲಿ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.