ಭಾರತ-ಇಂಗ್ಲೆಂಡ್ ಏಕದಿನ ಸರಣಿ: ಆತಂಕ ವ್ಯಕ್ತಪಡಿಸಿದ ಇಸಿಬಿ
ಸುಪ್ರೀಂ ಕೋರ್ಟ್ ತೀರ್ಪು ಬಳಿಕ ಕಾರ್ಯದರ್ಶಿ ಸ್ಥಾನದಿಂದ ವಜಾಗೊಂಡಿದ್ದ ಅಜಯ್ ಶಿರ್ಕೆ ಅವರ ಹೊಸದೊಂದು ವಿವಾದದಲ್ಲಿ ಸಿಲುಕಿದ್ದು, ಇಂಗ್ಲೆಂಡ್ ಕ್ರಿಕೆಟ್ ಮಂಡಳಿಗೆ ಪತ್ರ ಬರೆಯುವ ಮೂಲಕ ಹೊಸದೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ನವದೆಹಲಿ: ಸುಪ್ರೀಂ ಕೋರ್ಟ್ ತೀರ್ಪು ಬಳಿಕ ಕಾರ್ಯದರ್ಶಿ ಸ್ಥಾನದಿಂದ ವಜಾಗೊಂಡಿದ್ದ ಅಜಯ್ ಶಿರ್ಕೆ ಅವರ ಹೊಸದೊಂದು ವಿವಾದದಲ್ಲಿ ಸಿಲುಕಿದ್ದು, ಇಂಗ್ಲೆಂಡ್ ಕ್ರಿಕೆಟ್ ಮಂಡಳಿಗೆ ಪತ್ರ ಬರೆಯುವ ಮೂಲಕ ಹೊಸದೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ಲೋಧಾ ಸಮಿತಿ ಶಿಫಾರಸ್ಸುಗಳನ್ನು ಜಾರಿಗೆ ತರುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಿಂದ ವಜಾಗೊಂಡಿದ್ದ ಬಿಸಿಸಿಐನ ಮಾಜಿ ಕಾರ್ಯದರ್ಶಿ ಅಜಯ್ ಶಿರ್ಕೆ ಅವರು ವಜಾ ಆದೇಶದ ಬೆನ್ನಲ್ಲೇ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಬೋರ್ಡ್ ನ ಮುಖ್ಯಸ್ಥ ಗಿಲ್ಸ್ ಕ್ಲಾರ್ಕ್ ಅವರಿಗೆ ಕರೆ ಮಾಡಿದ್ದಾರೆ. ಈ ವೇಳೆ ಸುಪ್ರೀಂ ಆದೇಶದಂತೆ ತಾವು ಕಾರ್ಯದರ್ಶಿ ಹುದ್ದೆಯಿಂದ ಕೆಳಗಿಳಿದಿದ್ದು, ಪ್ರಸ್ತುತ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಏಕದಿನ ಸರಣಿ ಕುರಿತಂತೆ ಅನಿಶ್ಚಿತತೆ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಸರಣಿ ಕುರಿತಂತೆ ಆತಂಕ ವ್ಯಕ್ತಪಡಿಸಿರುವ ಇಸಿಬಿ ಬಿಸಿಸಿಐಗೆ ಇ-ಮೇಲ್ ರವಾನಿಸಿದ್ದು, "ಶಿರ್ಕೆ ತನಗೆ ದೂರವಾಣಿ ಕರೆ ಮಾಡಿದ್ದರು. ಈ ವೇಳೆ ಅವರು ಬಿಸಿಸಿಐ ಕಾರ್ಯದರ್ಶಿ ಸ್ಥಾನದಿಂದ ವಜಾಗೊಂಡಿರುವ ವಿಷಯ ತಿಳಿಯಿತು. ಅವರು ಇಂಗ್ಲೆಂಡ್ ಸರಣಿ ನಡೆಯುವ ಬಗ್ಗೆ ಚಿಂತೆ ವ್ಯಕ್ತಪಡಿಸಿದ್ದರು.
ಹೀಗಾಗಿ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಈ ಹಿಂದಿನಂತೆಯೇ ಸೂಕ್ತ ಭದ್ರತೆ, ದಿನ ಭತ್ಯೆ, ಹೊಟೇಲ್ ಬಿಲ್ಸ್ ಹಾಗೂ ಎಲ್ಲ ಸಮಯದಲ್ಲಿ ಸಾರಿಗೆ ವ್ಯವಸ್ಥೆ ಸಿಗಲಿದೆ ಎಂಬ ಬಗ್ಗೆ ಖಚಿತಪಡಿಸಬೇಕು. ಬಿಸಿಸಿಐ ಎಲ್ಲಿ ಪಂದ್ಯಗಳು ನಡೆಯಬೇಕೆಂದು ನಿರ್ಧರಿಸುತ್ತದೆ. ವೇಳಾಪಟ್ಟಿಯಲ್ಲಿ ಏನಾದರೂ ಬದಲಾವಣೆಯಿದೆಯೇ ಎಂಬ ಕುರಿತು ದಯವಿಟ್ಟು ಮಾಹಿತಿ ನೀಡಿ ಎಂದು ಬಿಸಿಸಿಐ ಸಿಇಒಗೆ ಬರೆದ ಇ-ಮೇಲ್‌ನಲ್ಲಿ ಇಸಿಬಿ ಮುಖ್ಯಸ್ಥರು ವಿನಂತಿಸಿದ್ದಾರೆ ಎಂದು ತಿಳಿದುಬಂದಿದೆ.
ಆದರೆ ಈ ಬಗ್ಗೆ ಅಜಯ್ ಶಿರ್ಕೆ ಅವರಲ್ಲಿ ವಿವರ ಕೇಳಿದಾಗ ಅವರು ವರದಿಯನ್ನು ನಿರಾಕರಿಸಿದ್ದಾರೆ. ಅಲ್ಲದೆ ಇಸಿಬಿ ಮುಖ್ಯಸ್ಥರ ಹೇಳಿಕೆಯನ್ನು ತಳ್ಳಿ ಹಾಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


