100ನೇ ಟೆಸ್ಟ್ ಪಂದ್ಯದಲ್ಲಿ ಸೆಂಚೂರಿ ಬಾರಿಸಿ ಹಾಶಿಂ ಆಮ್ಲ ಸಾಧನೆ
ತಮ್ಮ 100ನೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಬ್ಯಾಟ್ಸ್ ಮನ್ ಹಾಶಿಂ ಆಮ್ಲ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ...

ಜೊಹಾನ್ಸ್ ಬರ್ಗ್: ತಮ್ಮ 100ನೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಬ್ಯಾಟ್ಸ್ ಮನ್ ಹಾಶಿಂ ಆಮ್ಲ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ.
ಶ್ರೀಲಂಕಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಆಮ್ಲ ಈ ಸಾಧನೆ ಮಾಡಿದ್ದಾರೆ. 100ನೇ ಟೆಸ್ಟ್ ನಲ್ಲಿ ಶತಕ ಬಾರಿಸಿದ 8ನೇ ಬ್ಯಾಟ್ಸ್ ಮನ್ ಎಂದು ಖ್ಯಾತಿಗೆ ಭಾಜನರಾಗಿದ್ದಾರೆ. ಈ ಶತಕದ ಜತೆಗೆ ಆಮ್ಲ 26ನೇ ಟೆಸ್ಟ್ ಶತಕ ಸಿಡಿಸಿದ್ದು ವೆಸ್ಟ್ ಇಂಡೀಸ್ ದಿಗ್ಗಜ ಗ್ಯಾರಿ ಸೋಬರ್ಸ್ ದಾಖಲೆಯನ್ನು ಸರಿಗಟ್ಟಿದ್ದಾರೆ.
100ನೇ ಟೆಸ್ಟ್ ನಲ್ಲಿ ಶತಕ ಸಿಡಿಸಿದ ಆಟಗಾರರು ಕಾಲಿನ್ ಕೌಡ್ರಿ, ಜಾವೆದ್ ಮಿಯಾಂದಾದ್, ಗ್ರೀನಿಡ್ಜ್, ಸ್ಟಿವರ್ಟ್, ಇಂಜಮಾಮ್ ಉಲ್ ಹಕ್, ರಿಕಿ ಪಾಂಟಿಂಗ್ ಮತ್ತು ಗ್ರೇಮ್ ಸ್ಮಿತ್ ಈ ಸಾಧನೆ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


