ಕ್ರಿಕೆಟ್

ಇಂಗ್ಲೆಂಡ್ ಸರಣಿಗೆ ಟೀಂ ಇಂಡಿಯಾಗೆ ಹೊಸ ಜೆರ್ಸಿ

ಇಂಗ್ಲೆಂಡ್ ವಿರುದ್ಧ ಏಕದಿನ ಮತ್ತು ಟಿ20 ಸರಣಿಗಳನ್ನು ಆಡಲಿರುವ ಟೀಂ ಇಂಡಿಯಾಗೆ ಹೊಸ ಕಿಟ್ ನೀಡಲಾಗಿದೆ...

ಇಂಗ್ಲೆಂಡ್ ಸರಣಿಗೆ ಟೀಂ ಇಂಡಿಯಾಗೆ ಹೊಸ ಜೆರ್ಸಿ
ಟೀಂ ಇಂಡಿಯಾ
Published On :

ನವದೆಹಲಿ: ಇಂಗ್ಲೆಂಡ್ ವಿರುದ್ಧ ಏಕದಿನ ಮತ್ತು ಟಿ20 ಸರಣಿಗಳನ್ನು ಆಡಲಿರುವ ಟೀಂ ಇಂಡಿಯಾಗೆ ಹೊಸ ಕಿಟ್ ನೀಡಲಾಗಿದೆ.

ಟೀಂ ಇಂಡಿಯಾ ಪುರುಷ ಮತ್ತು ಮಹಿಳಾ ಕ್ರಿಕೆಟ್ ತಂಡ ಎರಡಕ್ಕೂ ಹೊಸ ಜೆರ್ಸಿ ನೀಡಲಾಗಿದ್ದು ಇದರ ಪ್ರಾಯೋಜಕತ್ವ ನೈಕ್ ಕಂಪನಿಯಾಗಿದೆ. ಹೊಸ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಹೊಸ ಜೆರ್ಸಿ ತೊಟ್ಟು ಆಟಗಾರರು ಕಣಕ್ಕಿಳಿಯಲಿದ್ದಾರೆ.

ಈ ಹೊಸ ಜೆರ್ಸಿಯೊಂದಿಗೆ ಆಟಗಾರರು ಯಾವುದೇ ಅಡೆತಡೆಗಳಿಲ್ಲದೆ ಪ್ರದರ್ಶನ ನೀಡಬಹುದಾಗಿದೆ. ಬಿಸಿಲಿನ ವಾತಾವರಣದಲ್ಲಿಯೂ ಆಟಗಾರರಿಗೆ ತಂಪು ನೀಡುವಲ್ಲಿ ಜೆರ್ಸಿ ನೆರವಾಗಲಿದೆ.

ಇಂಗ್ಲೆಂಡ್ ವಿರುದ್ಧದ ಸರಣಿಗೆ ವಿರಾಟ್ ಕೊಹ್ಲಿ ನಾಯಕತ್ವ ವಹಿಸಲಿದ್ದಾರೆ. ಬಿಸಿಸಿಐ ಬಿಡುಗಡೆ ಮಾಡಿರುವ ಫೋಟೋದಲ್ಲಿ ವಿರಾಟ್ ಕೊಹ್ಲಿ, ಮಹೇಂದ್ರ ಸಿಂಗ್ ಧೋನಿ, ಅಜಿಂಕ್ಯ ರಹಾನೆ ಮಹಿಳಾ ತಂಡದ ನಾಯಕಿ ಮಿಥಾಲಿ ರಾಜ್ ಮತ್ತು ಸ್ಮೃತಿ ಮಂದಾನ ಇದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.