ಕ್ರಿಕೆಟ್

ಮಾಜಿ ನಾಯಕ ಅಜರುದ್ದೀನ್‌ರ ಹೈದರಾಬಾದ್ ಕ್ರಿಕೆಟ್ ಸಂಸ್ಥೆ ಅಧ್ಯಕ್ಷನಾಗುವ ಕನಸು ಭಗ್ನ

ಟೀಂ ಇಂಡಿಯಾ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಹೈದರಾಬಾದ್ ಕ್ರಿಕೆಟ್ ಸಂಸ್ಥೆ(ಎಚ್ಸಿಎ) ಅಧ್ಯಕ್ಷ ಸ್ಥಾನಕ್ಕಾಗಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ....

ಮಾಜಿ ನಾಯಕ ಅಜರುದ್ದೀನ್‌ರ ಹೈದರಾಬಾದ್ ಕ್ರಿಕೆಟ್ ಸಂಸ್ಥೆ ಅಧ್ಯಕ್ಷನಾಗುವ ಕನಸು ಭಗ್ನ
ಮೊಹಮ್ಮದ್ ಅಜರುದ್ದೀನ್
Published On :
ಹೈದರಾಬಾದ್: ಟೀಂ ಇಂಡಿಯಾ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಹೈದರಾಬಾದ್ ಕ್ರಿಕೆಟ್ ಸಂಸ್ಥೆ(ಎಚ್ಸಿಎ) ಅಧ್ಯಕ್ಷ ಸ್ಥಾನಕ್ಕಾಗಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. 
ನಾಮಪತ್ರ ತಿರಸ್ಕೃತವಾಗಿರುವುದಕ್ಕೆ ಬೇಸರ ವ್ಯಕ್ತಪಡಿಸಿರುವ ಅಜರುದ್ದೀನ್ ನನ್ನ ವಿರುದ್ಧದ ಎಲ್ಲಾ ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ ಎಂದು ಹೇಳಿದ್ದಾರೆ. 2000ರಲ್ಲಿ ಬೆಳಕಿಗೆ ಬಂದಿದ್ದ ಮ್ಯಾಚ್ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿ ಮೊಹಮ್ಮದ್ ಅಜರುದ್ದೀನ್ ಕ್ರಿಕೆಟ್ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಅಜೀವ ನಿಷೇಧ ಹೇರಿತ್ತು.
ಲೋಧಾ ಸಮಿತಿ ಸುಧಾರಣೆಗೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಸ್ಥಾನಿಕ ಅಧಿಕಾರಿ ಅರ್ಶದ್ ಆಯೂಬ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ನಾಮಪತ್ರ ಸಲ್ಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.