ಮೊದಲ ಏಕದಿನ ಪಂದ್ಯ: ಇಂಗ್ಲೆಂಡ್ ವಿರುದ್ಧ ಭಾರತ ಗೆಲ್ಲಲು 351 ರನ್ ಗಳ ಬೃಹತ್ ಗುರಿ
ಮಹಾರಾಷ್ಟ್ರದ ಪುಣೆಯಲ್ಲಿ ಆರಂಭವಾಗಿರುವ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ತಂಡ ಬೃಹತ್ ಮೊತ್ತ ಪೇರಿಸಿದ್ದು, ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 360 ರನ್ ಪೇರಿಸುವ ಮೂಲಕ ಭಾರತಕ್ಕೆ ಗೆಲ್ಲಲು 361 ರನ್ ಗಳ ಬೃಹತ್ ಗುರಿಯನ್ನು ನೀಡಿದೆ.

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಆರಂಭವಾಗಿರುವ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ತಂಡ ಬೃಹತ್ ಮೊತ್ತ ಪೇರಿಸಿದ್ದು, ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 350 ರನ್ ಪೇರಿಸುವ ಮೂಲಕ ಭಾರತಕ್ಕೆ ಗೆಲ್ಲಲು 351 ರನ್ ಗಳ ಬೃಹತ್ ಗುರಿಯನ್ನು ನೀಡಿದೆ.
ಟಾಸ್ ಗೆದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಆದರೆ ಭಾರತದ ಲೆಕ್ಕಾಚಾರಗಳನ್ನು ತಲೆಕೆಳಗೆ ಮಾಡಿದ ಇಂಗ್ಲೆಂಡ್ ದಾಂಡಿಗರು ಬೃಹತ್ ಮೊತ್ತ ಪೇರಿಸಿದರು. ಇಂಗ್ಲೆಂಡ್ ತಂಡ ಆರಂಭದಲ್ಲೇ ಹೇಲ್ಸ್ ವಿಕೆಟ್ ಕಳೆದು ಕೊಳ್ಳುವ ಮೂಲಕ ಆರಂಭಿಕ ಆಘಾತ ಎದುರಿಸಿತಾದರೂ ಬಳಿಕ ರೂಟ್ ಜೊತೆ ಗೂಡಿದ ರಾಯ್ ಉತ್ತಮ ಜೊತೆಯಾಟ ನೀಡಿದರು. 73 ರನ್ ಗಳಿಸಿ ರಾಯ್ ಜಡೇಜಾ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರೆ, 78 ರನ್ ಗಳಿಸಿ ಆಡುತ್ತಿದ್ದ ರೂಟ್ ಬುಮ್ರಾ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರು.
ಬಳಿಕ ಬಂದ ಇಯಾನ್ ಮಾರ್ಗನ್ ಕೊಂಚ ಹೊತ್ತು ಕ್ರೀಸ್ ನಲ್ಲಿ ನಿಂತು 28 ರನ್ ಗಳಿಸಿ ಪಾಂಡ್ಯಾಗೆ ವಿಕೆಟ್ ಒಪ್ಪಿಸಿದರು. ಅಂತೆಯೇ ಬಟ್ಲರ್ ಕೂಡ 31 ರನ್ ಗಳಿಸಿ 38ನೇ ಓವರ್ ನಲ್ಲಿ ಮತ್ತದೇ ಪಾಂಡ್ಯಾಗೆ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಕ್ರೀಸ್ ಗಿಳಿದ ಬೆನ್ ಸ್ಟೋಕ್ಸ್ ಇಂಗ್ಲೆಂಡ್ ತಂಡಕ್ಕೆ ಉತ್ತಮ ಮುನ್ನಡೆ ಸಾಧಿಸಿಕೊಟ್ಟರು. ಕೇವಲ 40 ಎಸೆತಗಳಲ್ಲಿ 62 ರನ್ ಸಿಡಿಸಿದ ಸ್ಟೋಕ್ಸ್ ಇಂಗ್ಲೆಂಡ್ ತಂಡ ಬೃಹತ್ ಮೊತ್ತ ಪೇರಿಸಲು ನೆರವಾದರು. ಆದರೆ ಇನ್ನಿಂಗ್ಸ್ ನ ಅಂತಿಮ ಹಂತದಲ್ಲಿ ದೊಡ್ಡ ಹೊಡೆತಕ್ಕೆ ಕೈಹಾಕಿದ ಸ್ಟೋಕ್ಸ್ ಬುಮ್ರಾ ಬೌಲಿಂಗ್ ನಲ್ಲಿ ಯಾದವ್ ಕ್ಯಾಚ್ ನೀಡಿ ನಿರ್ಗಮಿಸಿದರು.
ಬಳಿಕ ಬಂದ ಅಲಿ ಹಾಗೂ ವೋಕ್ಸ್ ಸ್ಫೋಟಕ ಬ್ಯಾಟಿಂಗ್ ಮಾಡಿ ಸಿಕ್ಕ ಅಲ್ಪ ಓವರ್ ನಲ್ಲೇ ಉತ್ತಮ ರನ್ ಕಲೆ ಹಾಕಿದರು. ಅಂತಿಮವಾಗಿ ಇಂಗ್ಲೆಂಡ್ ತಂಡ ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 350 ರನ್ ಕಲೆಹಾಕಿ, ಭಾರತಕ್ಕೆ ಗೆಲ್ಲಲು 351 ರನ್ ಗಳ ಬೃಹತ್ ಗುರಿ ನೀಡಿತು.
ಭಾರತದ ಪರ ಹಾರ್ಧಿಕ್ ಪಾಂಡ್ಯಾ ಮತ್ತು ಬುಮ್ರಾ ತಲಾ 2 ವಿಕೆಟ್ ಗಳಿಸಿದರೆ, ಯಾದವ್ ಮತ್ತು ಜಡೇಜಾ ತಲಾ 1 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


