ಟೀಂ ಇಂಡಿಯಾ ಪರ ವೇಗದ ಶತಕ ಸಿಡಿಸಿದ 5ನೇ ಆಟಗಾರ ಕೇದಾರ್ ಜಾದವ್
ಇಂಗ್ಲೆಂಡ್ ನೀಡಿದ ಅತ್ಯಧಿಕ ರನ್ ಚೇಸ್ ಮಾಡಲು ನೆರವಾಯಿತು ಜಾದವ್ನ ವೇಗದ ಶತಕಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ವೇಗದ ಶತಕ ಸಿಡಿಸುವ ಮೂಲಕ ಕೇದಾರ್...

ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ವೇಗದ ಶತಕ ಸಿಡಿಸುವ ಮೂಲಕ ಕೇದಾರ್ ಜಾದವ್ ಟೀಂ ಇಂಡಿಯಾದ ಗೆಲುವಿಗೆ ಪ್ರಮುಖ ಕಾರಣರಾಗಿದ್ದಾರೆ.
ಪುಣೆಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಇಂಗ್ಲೆಂಡ್ 351 ರನ್ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ಆರಂಭಿಕರ ಆಟಗಾರರು ಪೆವಿಲಿಯನ್ ಪರೇಡ್ ನಡೆಸಿದರು. ತಂಡ 63 ರನ್ ಗಳಿಸುವಷ್ಟರಲ್ಲೇ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕ್ಕಿತ್ತು ಈ ವೇಳೆ ನಾಯಕ ವಿರಾಟ್ ಕೊಹ್ಲಿಗೆ ಜತೆಯಾದ ಕೇದಾರ್ ಜಾದವ್ ಸ್ಫೋಟಕ ಬ್ಯಾಟಿಂಗ್ ಮಾಡಿದರು. ಕೇವಲ 76 ಎಸೆತಗಳಲ್ಲಿ 120 ರನ್ ಸಿಡಿಸಿ ತಂಡದ ಗೆಲುವಿಗೆ ಕಾರಣರಾದರು.
ಕೇದಾರ್ ಜಾದವ್ 65 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ಇದು ಟೀಂ ಇಂಡಿಯಾ ಪರ ವೇಗದ ಶತಕ ಸಿಡಿಸಿದ ಐದನೇ ಆಟಗಾರ ಎಂಬ ಖ್ಯಾತಿಗೆ ಜಾದವ್ ಪಾತ್ರರಾಗಿದ್ದಾರೆ.
ಟೀಂ ಇಂಡಿಯಾ ಪರ ವೇಗದ ಶತಕ ಸಿಡಿಸಿದ ಆಟಗಾರರು
1. ವಿರಾಟ್ ಕೊಹ್ಲಿ 52 ಎಸೆತ
2. ವಿರೇಂದ್ರ ಸೆಹ್ವಾಗ್ 60 ಎಸೆತ
3. ಮೊಹಮ್ಮದ್ ಅಜರುದ್ದೀನ್ 62 ಎಸೆತ
4. ಯುವರಾಜ್ ಸಿಂಗ್ 64 ಎಸೆತ
5. ಕೇದಾರ್ ಜಾದವ್ 65 ಎಸೆತ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


